ಬೆಳಗಿರೆ ಆರುತಿಯ ಶ್ರೀ ತುಳಸಿಗೆ ಪ
ಬೆಳಗಿರೆ ಆರುತಿ ತುಳಸಿದೇವಿಗೆ ನಿತ್ಯ
ಲಲನೆಯರೆಲ್ಲ ಮಂಗಳವೆಂದು ಪಾಡುತ ಅ.ಪ
ಸುಧೆಯ ಕಲಶದೊಳು ಮಧುವೈರಿನಯನದ
ಮುದ ಜಲಬೀಳಲು ಉದುಭವಿಸಿದಳೆಂದು 1
ದರುಶನ ಮಾತ್ರದಿ ದುರಿತಗಳೋಡಿಸಿ
ಸ್ಥಿರವಾದ ಸೌಭಾಗ್ಯ ಕರುಣಿಸುವಳೆಂದು 2
ಇಳೆಯೊಳು ಕಾರ್ಪರ ನಿಲಯ ಶ್ರೀನರಹರಿ
ಒಲುಮೆಯ ಪಡೆದ ಶ್ರೀ ತುಳಸಿದೇವಿಗೆ ಬೇಗ3
****