Showing posts with label ಬ್ರಹ್ಮ ಲಿಖಿತವ ಮೀರಿ ಬಾಳ್ವರುಂಟು ನಿರ್ಮಳದಿ neleyadikeshava BRAHMA LIKHITAVA MEERI BAALVARUNTU NIRMALADI. Show all posts
Showing posts with label ಬ್ರಹ್ಮ ಲಿಖಿತವ ಮೀರಿ ಬಾಳ್ವರುಂಟು ನಿರ್ಮಳದಿ neleyadikeshava BRAHMA LIKHITAVA MEERI BAALVARUNTU NIRMALADI. Show all posts

Wednesday, 8 December 2021

ಬ್ರಹ್ಮ ಲಿಖಿತವ ಮೀರಿ ಬಾಳ್ವರುಂಟು ನಿರ್ಮಳದಿ ankita neleyadikeshava BRAHMA LIKHITAVA MEERI BAALVARUNTU NIRMALADI

 


ಬ್ರಹ್ಮ ಲಿಖಿತವ ಮೀರಿ ಬಾಳ್ವರುಂಟುನಿರ್ಮಳದಿ ವೈಷ್ಣವರ ಮನಮುಟ್ಟಿ ಭಜಿಸಿ ಪ


ಪಾಪಕೆ ಹೇಸದ ಶಬರ ಬಟ್ಟೆಯನು ಕಾದಿರಲುಆ ಪಥದಿ ಸಲೆ ವೈಷ್ಣವನು ಬಂದುಪಾಪವನು ತಪ್ಪಿಸಿ ರಾಮನಾಮವ ಕೊಡಲುಕಾಪಥಕ ವಾಲ್ಮೀಕಿ ಮುನಿಯಾಗಲಿಲ್ಲವೆ ? 1


ಪಂಚಮಹಾಪಾತಕವ ಮಾಡಿದ ಅಜಾಮಿಳನವಂಚಿಸಿ ಯಮದೂತರೆಳೆದೊಯ್ಯುತಿರಲುಕಿಂಚಿತ್ತು ಹರಿನಾಮವನಾಕಸ್ಮಿಕದಿ ನೆನೆಯೆಅಂಚಿಗೆಳೆದೊಯ್ದವರು ವಿಷ್ಣುದೂತರಲ್ಲವೆ ?2


ಬಾಲಕ ತನ್ನ ತಾಯ್ತಂದೆಯೊಳ್ ಮುನಿದು ಹಲವುಕಾಲ ವನದೊಳು ತಪವ ಮಾಡಲುನೀಲಮೇಘಶ್ಯಾಮ ಮೆಚ್ಚಿ ಬಾಲಕನಿಗೆಮೇಲಾದ ಪದವಿಯನು ಕೊಡಲಿಲ್ಲವೆ ? 3


ದಶಕಂಠನನುಜನು ಜಾನಕಿಯ ಬಿಡ ಹೇಳೆಅಸುರ ಕೋಪವ ತಾಳಿ ಹೊರಗಟ್ಟಿದಾಗಪೆಸರಗೊಳುತ ಬಂದು ಮೊರೆಹೊಕ್ಕ ವಿಭೀಷಣಗೆಶಶಿರವಿ ಪರ್ಯಂತ ಪಟ್ಟಗಟ್ಟಲಿಲ್ಲವೆ ? 4


ಕಲಿಗೆ ಬೆದರುವರಲ್ಲ ಕಾಲನ ಬಾಧೆಗಳಿಲ್ಲಛಲದಿ ನರಳಿ ಪುಟ್ಟುವ ಗಸಣೆಯಿಲ್ಲಒಲಿದು ಕಾಗಿನೆಲೆಯಾದಿಕೇಶವರಾಯನಸಲೆ ನಂಬಿದವರಿಗೆ ಮುಕುತಿಯಿತ್ತುದಿಲ್ಲವೆ ? 5

***