Showing posts with label ಭಕ್ತವತ್ಸಲನೀತ ಶಕ್ತ ಸದ್ಗುರುನಾಥ ಸಕಲ ಸಮ್ಮತ ಏಕೋದೇವನೀತ mahipati. Show all posts
Showing posts with label ಭಕ್ತವತ್ಸಲನೀತ ಶಕ್ತ ಸದ್ಗುರುನಾಥ ಸಕಲ ಸಮ್ಮತ ಏಕೋದೇವನೀತ mahipati. Show all posts

Wednesday, 1 September 2021

ಭಕ್ತವತ್ಸಲನೀತ ಶಕ್ತ ಸದ್ಗುರುನಾಥ ಸಕಲ ಸಮ್ಮತ ಏಕೋದೇವನೀತ ankita mahipati

 ಭಕ್ತವತ್ಸಲನೀತ ಶಕ್ತ ಸದ್ಗುರುನಾಥ ಸಕಲ ಸಮ್ಮತ ಏಕೋದೇವನೀತ ಪ  


ಬಲಿಯಬಾಗಿಲ ಕಾಯ್ದು ಒಲಿದ ಫಲುಗುಣಗೀತ ತಲೆಗಾಯ್ದು ಪ್ರಹ್ಲಾದನ ಪ್ರಾಣಪಡದಾತ ಸಲಹಿ ಪಾಂಡವರ ರಕ್ಷಿಸಿದಾತ 1 ದಿಟ್ಟ ಧ್ರುವಗೊಲಿದು ನಿಜಪಟ್ಟಗಟ್ಟಿದಾತ ನಷ್ಟಾಜಮಿಳನ ನಿಷ್ಠೆಮಾಡಿದಾತ ಕೊಟ್ಟು ವಿಭೀಷಣಗೆ ಇಟ್ಟ ಲಂಕೆಯ ಲೀತ ಶಿಷ್ಟಜನಪಾಲಕ ಸೃಷ್ಟೇಶ 2 ಶಿಲೆಗೆ ಉದ್ಧರಗತಿಯ ಇಳಿಯೊಳಗೆ ಇತ್ತಾತ ಮೂಲೋಕದೊಡೆಯ ಶ್ರೀಹರಿಯು ಈತ ಪಾಲಿಸುವ ಮಹಿಪತಿಯ ಲೋಲಲಕ್ಷ್ಮೀಕಾಂತ ಕುಲಕೋಟಿ ಬಂಧು ತಾ ಬಳಗವೀತ 3

***