Showing posts with label ಭಕ್ತಿಗೆ ಮೂರು ಗುಣಗಳು ಬೇಕು ಯುಕ್ತಿವಂತರು ಕೇಳಿ ಮುಕ್ತಿ ankita mahipati. Show all posts
Showing posts with label ಭಕ್ತಿಗೆ ಮೂರು ಗುಣಗಳು ಬೇಕು ಯುಕ್ತಿವಂತರು ಕೇಳಿ ಮುಕ್ತಿ ankita mahipati. Show all posts

Wednesday, 1 September 2021

ಭಕ್ತಿಗೆ ಮೂರು ಗುಣಗಳು ಬೇಕು ಯುಕ್ತಿವಂತರು ಕೇಳಿ ಮುಕ್ತಿ ankita mahipati

ಕಾಖಂಡಕಿ ಶ್ರೀ ಮಹಿಪತಿರಾಯರು

ಭಕ್ತಿಗೆ ಮೂರು ಗುಣಗಳು ಬೇಕು ಯುಕ್ತಿವಂತರು ಕೇಳಿ ಮುಕ್ತಿಶೀಲವು ತಿಳಿದು ನಿಜವಿರಕ್ತತನದಲಿ ಬಾಳಿ ಪ  


ಪ್ರೇಮ ಪ್ರೀತಿ ರತಿ ನೇಮದಲಿ ಶ್ರೀಸ್ವಾಮಿ ಚರಣದಲಿಡಬೇಕು ಸೌಮ್ಯ ಸಮಾಧಾನದಲಿ ತಾನಮೃತವನು ಹಿಡಿಯಬೇಕು ನಿರ್ಮಳದಲಿ ನಡಿಬೇಕು ಪಡೆದು ಸಮದೃಷ್ಟಿಗುಡಬೇಕು 1 

ನಿತ್ಯ ವಿವೇಕವು ತಿಳಿದು ಪಥ್ಯದಲಿ ನಡಿಯಬೇಕು ಚಿತ್ತವೃತ್ತಿ ಸವೃತ್ತಿಯ ಮಾಡಿ ಸತ್ಯದಲಿ ನುಡಿಯಬೆಕು ಉತ್ತಮೋತ್ತಮ ವಸ್ತುದ ನಿಜಸುಖ ಹೃತ್ಕಮಲದಲಿಡಬೇಕು ಭಕ್ತಿಗೆ ಭಾವನೆ ಬಲಗೊಂಡು ವೈರಾಗ್ಯದ ಸುಖ ತೊಡಬೇಕು 2 

ಸೋಹ್ಯ ಸೋನ್ನಿಯ ಸೂತ್ರವ ತಿಳಿದು ಸ್ಥಾಯಿಕನಾಗಿರಬೇಕು ಧ್ಯೇಯಧ್ಯಾತಧ್ಯಾನವ ತಿಳಿದು ಮಾಯದ ಮೊನೆ ಮುರಿಬೇಕು ನ್ಯಾಯ ನೀತಿಯ ನೆಲೆನಿಭವನು ಉಪಾಯದಲಿ ಅರಿಯಬೇಕು ಪಾಯಕನಾಗನುದಿನ ಮಹಿಪತಿ ಗುರುಪಾದದಿ ಸ್ಥಿರವಿರಬೇಕು 3

***