Showing posts with label ಭವ ಸಾಗರಕೆ ಸ್ವಲ್ಪ vijaya vittala. Show all posts
Showing posts with label ಭವ ಸಾಗರಕೆ ಸ್ವಲ್ಪ vijaya vittala. Show all posts

Wednesday, 16 October 2019

ಭವ ಸಾಗರಕೆ ಸ್ವಲ್ಪ ankita vijaya vittala

ಕಟ್ಟೆಯ ಕಟ್ಟಿದರು ಭವ ಸಾಗರಕೆ ಸ್ವಲ್ಪ
ಬಿಟ್ಟು ವೇಗದಿಂದ ಸಾಧ್ಯ ಮಾಡಿಕೊಂಡು
ಮೆಟ್ಟಿಕೆಯಿಂದಲಿ ದಾಟಿ ಪೋದರು ಜಗ
ಜಟ್ಟಿ ದಾಸರು ತಮಗೆ ಸುಲಭವಾದದು ಯನಗೆ
ಇಟ್ಟುಪೋದರೆಯಿಂದು ಗುಟ್ಟು ತೋರುತಲಿದೆ ಸಾಧಾರಣವಲ್ಲ ||1||

ದಿಟ್ಟವಾದಕ ವನಯನ್ನಿಂದಾದದಲ್ಲ
ಬಿಟ್ಟಿಯವರಿಗೆ ತಿಳಿಯಲಿಹದೆ
ಕೊಟ್ಟಿಗೆ ಮೇಲುಪ್ಪರಿಗೆಯಾಗುವದೆ
ಹುಟ್ಟಾರಭ್ಯವಾಗಿ ಮಂದನಾಗಿದ್ದವಗೆ
ಮಟ್ಟಯಿಲ್ಲದೆ ಬುದ್ಧಿ ಬರುವದೆಂತೊ
ಧಿಟ್ಟಳಿ ಮಹಿಮ ಶಿರಿ ವಿಜಯವಿಠಲ ಮನ
ಮುಟ್ಟಿ ಭಜಿಸಿದವ ದಾಸರ ಕರುಣವೆನ್ನಿ||2||
************

ವಿಜಯದಾಸ
ಭವ ಸಾಗರಕೆ ಸ್ವಲ್ಪ ಪ

ಬಿಟ್ಟು ವೇಗದಿಂದ ಸಾಧ್ಯ ಮಾಡಿಕೊಂಡು
ಮೆಟ್ಟಿಕೆಯಿಂದಲಿ ದಾಟಿ ಪೋದರು ಜಗ
ಜಟ್ಟಿ ದಾಸರು ತಮಗೆ ಸುಲಭವಾದದು ಯನಗೆ
ಇಟ್ಟುಪೋದರೆಯಿಂದು ಗುಟ್ಟು ತೋರುತಲಿದೆ ಸಾಧಾರಣವಲ್ಲ 1

ಕೊಟ್ಟಿಗೆ ಮೇಲುಪ್ಪರಿಗೆಯಾಗುವದೆ
ಹುಟ್ಟಾರಭ್ಯವಾಗಿ ಮಂದನಾಗಿದ್ದವಗೆ
ಮಟ್ಟಯಿಲ್ಲದೆ ಬುದ್ಧಿ ಬರುವದೆಂತೊ
ಧಿಟ್ಟಳಿ ಮಹಿಮ ಶಿರಿ ವಿಜಯವಿಠಲ ಮನ

ಮುಟ್ಟಿ ಭಜಿಸಿದವ ದಾಸರ ಕರುಣವೆನ್ನಿ2
*********