Showing posts with label ಭಾವಿಸಮೀರ ಗುರು ಶ್ರೀ ವಾದಿರಾಜ others vadiraja stutih. Show all posts
Showing posts with label ಭಾವಿಸಮೀರ ಗುರು ಶ್ರೀ ವಾದಿರಾಜ others vadiraja stutih. Show all posts

Friday, 27 December 2019

ಭಾವಿಸಮೀರ ಗುರು ಶ್ರೀ ವಾದಿರಾಜ others vadiraja stutih

ಭಾವಿಸಮೀರ ಗುರು ಶ್ರೀ ವಾದಿರಾಜ
ನಿಮ್ಮ ಸೇವಿಪ ಜನರಿಗಭೀಷ್ಟವನೀವ ||pa||

ಹನುಮ ಭೀಮ ಮಧ್ವರೊಡಗೂಡಿ ವೃಂದಾವನ-
ದೊಳು ಮೆರಸುವ ಮುಂದಿನ ಸೊಬಗ
ಪಂಥದಿ ವೀರಶೈವರ ಗುರುವನೆ ಗೆದ್ದು
ಹತ್ತಿದೆ ಮುತ್ತಿನ ದಿವ್ಯ ಪೀಠವನು ||1||

ಕುಂಡಿನೇಶನ ತನುಜಾತೆಯ ಪತ್ರವ
ಪುಂಡರೀಕಾಕ್ಷನಿಗರ್ಪಿಸಿದ್ಯಲ್ಲೋ
ಮದುವೆಯ ಸಮಯದಿ ಶಪಥದಿಂದಲಿ ಬಂದು
ವಧುವಿನ ಭಾಗ್ಯವನುಳಿಸಿದೆಯಲ್ಲೋ ||2||

ಅರಿತುಂಡು ವಿಷವ ನೀನರಗಿಸಿಕೊಂಡ್ಯಲ್ಲೊ
ನರಪತಿತನಯನ ಬದುಕಿಸಿದ್ಯಲ್ಲೋ
ಭಜಿಸುತ ರಾಜೇಶ ಹಯಮುಖನಂಘ್ರಿಯ
ತ್ರಿಜಗದೊಳಧಿಕ ಸೋದಾಪುರದೊಳು ನಿಂದ್ಯೋ ||3||
**********