Showing posts with label ಭಾಸ್ಕರ ಗುರುವಿನ ಭಾಸನುದಿನವಿರೆ ಆಶಿನ್ನೊಬ್ಬರದ್ಯಾಕೆ mahipati. Show all posts
Showing posts with label ಭಾಸ್ಕರ ಗುರುವಿನ ಭಾಸನುದಿನವಿರೆ ಆಶಿನ್ನೊಬ್ಬರದ್ಯಾಕೆ mahipati. Show all posts

Wednesday, 1 September 2021

ಭಾಸ್ಕರ ಗುರುವಿನ ಭಾಸನುದಿನವಿರೆ ಆಶಿನ್ನೊಬ್ಬರದ್ಯಾಕೆ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಭಾಸ್ಕರ ಗುರುವಿನ ಭಾಸನುದಿನವಿರೆ ಆಶಿನ್ನೊಬ್ಬರದ್ಯಾಕೆ ಲೇಸಾಗಿಹ್ಯ ಘನದಯದಾಸೈನಗಿರೆ ನಾಸ್ತ್ಯೆನಗೆಂಬುವದ್ಯಾಕೆ ಪ  


ಸೂಸುತ ನಿಜ ನಿಧಾನದ ರಾಶಿರೆ ಕಾಸಿನ ಕಳವಳಿಕ್ಯಾಕೆ ವಾಸವಾಗ್ಹೆಜ್ಜೆಜ್ಜಿಗೆ ಗುರುವಿನ ಆಶ್ರಿನ್ನೊಬ್ಬರದ್ಯಾಕೆ ಗ್ರಾಸಕೆದುರಿಡುತಿರೆ ಎನ್ನೊಡೆಯ ಸೋಸಿಲೆ ಬಯಸುವದ್ಯಾಕೆ 1 

ಗುರುದೈವೇ ಗುರುತಾಗಿರಲು ತಾ ಪರದೈವಗಳಿನ್ಯಾಕೆ ಶಿಖಾಮಣಿ ಇರಲು ಶರಣು ಇನ್ನೊಬ್ಬರಿಗ್ಯಾಕೆ ಕರುಣಾಮೃತ ಸುರರಸ ಮಳೆಗರೆವುತಲಿರೆ ಪರರಂಡಲೆವದ್ಯಾಕೆ ಇರುಳ್ಹಗಲೆ ಗುರುದಯ ಕವಚೆನಗಿರೆ ದುರಿತಭವ ಭಯವ್ಯಾಕೆ 2 

ಇಹ್ಯಪರಕೆ ಗುರು ನಾಮವೆನಗಿರಲು ಸಾಹ್ಯಮನುಜರದ್ಯಾಕೆ ಸಹಕಾರವೆ ಸದ್ಗುರು ಮೂರ್ತಿರಲು ಸಾಯಾಸವೆನಗ್ಯಾಕೆ ಮಹಿಪತಿಸ್ವಾಮಿ ಶ್ರೀಪತಿ ಸಮರ್ಥಿರೆ ದುರ್ಮತಿಗಳ ಹಂಗ್ಯಾಕೆ ಸಹಿತ ಗುರು ತಾಯಿತಂದೆನಗಿರೆ ಬಾಹ್ಯವಿಹಿತದವನ್ಯಾಕೆ 3

***