ಕಾಖಂಡಕಿ ಶ್ರೀ ಮಹಿಪತಿರಾಯರು
ಭ್ರಮಮೂಲಮಿದಂ ಜಗತು ನೇಮದ ನಿಜಮಾತು ಪ
ಭ್ರಮೆಯಿಂದಲಿ ಭ್ರಮಣ್ಹತ್ಯದ ನೋಡಿ ಭ್ರಮೆ ನೆಲೆಗೊಳಿಸದು ಮನ ಸ್ಥಿರಮಾಡಿ ಭ್ರಮಿಸೇದನೇಕ ಜನ್ಮ ತಿರುಗಾಡಿ ಭ್ರಮಿಯಲಿ ಬಾರದು ನಿಜ ಕೈಗೊಡಿ 1
ಭ್ರಮೆಯಕ ಭ್ರಮೆ ಹತ್ತೇದ ಬಲು ಬಹಳ ಭ್ರಮಯು ಮಾಡೇದ ಸಂಸಾರದ ಮೇಳ ಭ್ರಮೆ ಇಲ್ಲದ್ಯಾತಕೆ ಏನ್ಹೇಳ ನೇಮದಿ ಹೊಳೆವುದು ವಸ್ತು ಅಚಲ 2
ನಾ ನೀನೆಂಬುದು ಭ್ರಮೆಯದ ಮೂಲ ಅನುದಿನ ಬೆನ್ನಟ್ಟಿದೆ ಬಹುಕಾಲ ಖೂನಕೆ ಬಾರದೆ ಆತ್ಮಾನುಕೂಲ ತಾನೆ ಮುಸುಕ್ಯದೆ ಭ್ರಮಿ ಸಕಲ 3
ನಿಶ್ಚಲವಾಗದೆ ಜ್ಞಾನದ ಉಗಮವು ಹೆಚ್ಚು ಕುಂದಿಗೆ ಹೊಡೆದಾಡುದು ಭ್ರಮೆಯು ಹುಚ್ಚುಮಾಡೇದ ವಿಷಯ ಭ್ರಮೆಯು ಎಚ್ಚರಿಸುವ ಸದ್ಗುರು ದಯಕ್ರಮವು 4
ನಾ ಮವನಿಷ್ಟರೊಳಾಡಿದ ಮಾತು ನಿಮಿಷಾರ್ಧದಲಿ ಭ್ರಮೆಯಗಳೆಯಿತು ಸ್ವಾಮಿಸದ್ಗುರು ಕೃಪೆಯಲಿ ತಿಳದೀತು ನೇಮಿಸಿ ತಿಳಿಕೊ ಮಹಿಪತಿನಿವಾಂತು 5
***