Showing posts with label ಭ್ರಷ್ಟನೆಂದಿಸಿದೆಯಾ ಕೃಷ್ಣನೇ ಎನ್ನ narahari P. Show all posts
Showing posts with label ಭ್ರಷ್ಟನೆಂದಿಸಿದೆಯಾ ಕೃಷ್ಣನೇ ಎನ್ನ narahari P. Show all posts

Thursday, 5 August 2021

ಭ್ರಷ್ಟನೆಂದಿಸಿದೆಯಾ ಕೃಷ್ಣನೇ ಎನ್ನ ankita narahari P

 ..

kruti by pradyumna teertha ಪ್ರದ್ಯುಮ್ನತೀರ್ಥರು


ಭ್ರಷ್ಟನೆಂದಿಸಿದೆಯಾ ಕೃಷ್ಣನೇ ಎನ್ನ ಪ


ಭ್ರಷ್ಟನೆಂದಿನಿಸಿದ್ಯಾ ಸೃಷ್ಟಿಗೀಶನೆ ಪರ

ಮೇಷ್ಟಿ ಜನಕ ದಿವ್ಯ ದೃಷ್ಟಿ ಕೊಡದಲೆನ್ನ ಅ.ಪ

ನರರ ಸಂದಣಿಯಲಿ ವಿರತಿ ಮಾತಾಡಿಸಿ

ಮಾರನಾಟದಿ ಮನವೆರಗುವಂದದಿ ಮಾಡಿ 1


ಕಾಷಾಯ ದಂಡಿ ವೇಷವ ಧರಿಸಿ ಮುನ್ನ

ಮೋಸಪಡಿಸಿ ಸ್ತ್ರೀಯರಾಸೆ ಬಿಡಿಸಿದೆನ್ನ 2


ಸೀಲರಂದಲಿ ಜಪಮಾಲೆ ಕೈಯಲಿ ಪಿಡಿಸಿ

ಕಾಳಿಮರ್ಧನ ದೇವ ಮಲಿನ ಮನವನಿತ್ತು 3


ಕರವಶವನೆ ಮಾಡಿ ಸರಸದಿಂದ ಕಲೆಹಾಕಿ

ಮರೆಸಿ ನಿನ್ನನೆ ಕೃಷ್ಣ ನಿರಯಭಾಗಿಯ ಮಾಡಿ4


ಕರುಣವಾರಿಧಿ ಎನ್ನ ಮರುಳುಗೊಳಿಸಿ ವಿಷಯ

ಶರಪಂಜರದಿ ಬಿಗಿದು ಚರಣ ತೋರಿಸದೆಲೆ 5


ಮದ ಮತ್ಸರ ಕಾಮ ಕ್ರೋಧ ಲೋಭ ಮೋಹ

ಒದಗಿಸೆನ್ನಲಿ ದೂರನಾದಿಯ ಹೇ ಮಾಧವ 6


ಪತಿತಾಗ್ರಣಿಯು ನಾನು ಪತಿತ ಪಾವನ ನೀನು

ಸತತ ನಿನ್ನಯ ಸಂಸ್ಮøತಿಯ ನೀಡದಲೆನ್ನ 7


ದ್ವಿಜ ಅಜಮಿಳ ನಿಜನಾಮದಿಂದಲಿ

ಸುಜನನೆಂದೆನಿಸಿದ್ದು ನಿಜತೋರದಲೆನ್ನ 8


ಹೀನರೊಳೆನ್ನೆಂಥ ಹೀನ ಜನರ ಕಾಣೆ

ಸಾನುರಾಗದಿ ಕಾಯೊ ಶ್ರೀ ನರಹರಿಯೆ 9

***