Showing posts with label ಮಂಗಳ ಮಂಗಳ ಜಯಮಂಗಳ ಶುಭಮಂಗಳ ಸುರಗುರು mahipati. Show all posts
Showing posts with label ಮಂಗಳ ಮಂಗಳ ಜಯಮಂಗಳ ಶುಭಮಂಗಳ ಸುರಗುರು mahipati. Show all posts

Wednesday, 1 September 2021

ಮಂಗಳ ಮಂಗಳ ಜಯಮಂಗಳ ಶುಭಮಂಗಳ ಸುರಗುರು ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಮಂಗಳ ಮಂಗಳ ಜಯಮಂಗಳ ಶುಭಮಂಗಳ ಸುರಗುರು ಮೂರುತಿಗೆ ಸಹಸ್ರ ಮಂಗಳ ಶ್ರೀನಿಧಿ ಶ್ರೀಪತಿಗೆ ಪ  


ವಿದುರವಂದಿತ ವಿಶ್ವಪಾಲಗ ಮಂಗಳ ಬುಧಜನ ಸಹಕಾರಗ ಮಂಗಳ ಯದುಕುಲೋತ್ತಮ ಶ್ರೀಧರಗ ಮಂಗಳ ಮದನಮೋಹನ ಮೂರುತಿಗೆ ಮಂಗಳ 1 

ಕಸ್ತುರಿಯ ತಿಲಕ ಕಾರುಣ್ಯಗ ಮಂಗಳ ಮಸ್ತಕಲಿಹ್ಯ ಮಣಿಮುಗಟಗ ಮಂಗಳ ಕೌಸ್ತುಭಧರ ಭೂಷಣಗ ಮಂಗಳ ಹಸ್ತಿಗೊಲಿದು ಸುವಸ್ತುಗ ಮಂಗಳ 2 

ಭಾಸ್ಕರಕೋಟಿ ಪ್ರಕಾಶಗ ಮಂಗಳ ಭಾಸುವ ಭಾವಭೋಕ್ತಗ ಮಂಗಳ ವಾಸವಾಗಿ ಹ್ಯ ಸದೋದಿತಗ ಮಂಗಳ ದಾಸ ಮಹಿಪತಿ ಸ್ವಾಮಿಗ ಮಂಗಳ 3

***