ಮಂಗಳಂ ನರಶಿಂಗ ಮೂರುತಿಗೆ ಲಕ್ಷ್ಮೀಸಮೇತಗೆ
ತÀುಂಗ ಮಹಿಮ ವಿಹಂಗ ವಾಹನಗೆ
ಅಂಗಜನಪಿತಗೆ ಅಂಗುಟದಿ ಗಂಗೆಯನು ಪಡೆದವಗೆ ಮಾ
ತಂಗವರದಗೆ ಪ
ವಾರಿಜಾಸನ ಮುಖ್ಯಸುರನುತಗೆ ಉ-
ದಾರ ಚರಿತಗೆ ಸೇರಿದವರಘದೂರ ಮಾಡುವಗೆ
ಕಾರ್ಪರ ಋಷಿಗೆ ಘೋರ ತಪಸಿಗೆ ಒಲಿದು ಬಂದವಗೆ
ಅಶ್ವತ್ಥ ರೂಪಗೆ 1
ಕುಕ್ಷಿಯೊಳು ಜಗವಿಟ್ಟು ರಕ್ಷಿಪಗೆ ಕರುಣಾಕ-
ಟಾಕ್ಷಗೆ ವಕ್ಷದೊಳು ಶ್ರೀ ವತ್ಸಲಾಂಛನಗೆ ದ್ರೌಪದಿ ದೇವಿಗೆ
ಅಕ್ಷಯಾಂಬರವಿತ್ತು ಸಲಹಿದಗೆ ಲಕ್ಷ್ಮೀನೃಸಿಂಹಗೆ 2
ಕೃಷ್ಣವೇಣಿ ತಟವಿರಾಜಿತಗೆ ಸೃಷ್ಟ್ಯಾದಿ ಕರ್ತಗೆ
ಶ್ರೇಷ್ಠತರು ಪಿಪ್ಪಲದಿ ಪ್ರಕಟಿತಗೆ ದುಷ್ಟನಿಗ್ರಹಗೆ
ದ್ಯಷ್ಟ ಬಾಹುಗಳಿಂದ ಭಜಕರಿಗೆ ಇಷ್ಟಾರ್ಥಗರಿವಗೆ 3
ಹಿಂದೆ ಗೋರೂಪದಲಿ ಬಂದವಗೆ ಬಹುಸುಂದರಾಂಗಗೆ
ವಂದಿಸುವೆ ಶೀ ವೇಂಕಟೇಶನಿಗೆ ಮಂದರೋದ್ಧರಗೆ
ವಂದಿಪರ ಭವ ಬಂಧ ಬಿಡಿಸುವಗೆ ಆನಂದವೀವಗೆ 4
ತರುಳ ಪ್ರಹ್ಲಾದನ್ನ ಕಾಯ್ದವಗೆ ಸುರಸಾರ್ವಭೌಮಗೆ
ಶರಣು ಜನ ಮಂದಾರನೆನಿಸುವಗೆ ಭೂಸುರರ ಪೊರಿವಗೆ
ಧರಣಿಯೊಳು ಕಾರ್ಪರ ಸುಮಂದಿರಗೆ ಶಿರಿನಾರಶಿಂಹಗೆ 5
****