..
ಮಗುವ ತಡೆಯಬಾರದೆ ಮಾನಿನಿಯರುಸುಗುಣ ಚೆನ್ನಿಗನೆಂಬ ಸೊಬಗುಳ್ಳ ಮಗುವ ಪ
ನೀರೊಳಗೆ ಪೊಕ್ಕು ತಾ ಬೀರುತಿದೆ ಮಾತುಗಳಧರಣಿಧರ ತಳಕಿಳಿದು ಬಾರದಿದೆಕೊಘೋರ ಪಾತಕವೆಂಬ ಬೇರ ಮೆಲ್ಲುತಲಿದೆಕೊಬಾರಯ್ಯ ಎನೆ ಕೋಪವೇರುತಿಹ ಮಗುವ 1
ಬೇಡುತಿದೆ ದಾನವನು ನೀಡುತಿದೆ ಪಾದವನುರೂಢಿಪಾಲರ ಕಂಡು ಕೊಲ್ಲುತಿದೆಕೊಓಡುತಿದೆ ಮೃಗದೊಡನೆ ಆಡುತಿದೆ ಕಪಿಗಳೊಳುನೋಡಲ್ಕರಿನಾಗರ ಹಾವ ತುಳಿಯುತಿದೆಕೊ 2
ಇತ್ತ ಬಾರೆಂದೆನಲು ಬತ್ತಲೆ ನಿಲ್ಲುತಿದೆಕೊಮತ್ತೆ ತೇಜಿಯನೇರಿ ನಲಿಯುತಿದೆಕೊಹತ್ತೆ ಬಂದವರಿಗೆ ಅರ್ತಿಯನು ನೀಡುತಿಹನಿತ್ಯ ವೈಕುಂಠದಲಿ ನಲಿವ ಮಗುವ 3
***