..
ಮಣ್ಣಿನ ಮಹಿಮೆ ಮನುಜ ನೀನರಿಯೆಷಣ್ಮಹಿಷಿಯುತ ಸರ್ವೋತ್ತಮನ ಲೀಲೆ ಪ
ಮಣ್ಣಲಿ ದೊರಕಿದಳು ಮಾತಾಯಿ ಸೀತಾಮಣ್ಣಳೆದ ವಾಮನ ಮಹಬಲಿಯ ಬೇಡಿಮಣ್ಣು ಪಾವನವಾಯ್ತು ರಾಮಪದ ಸ್ಪರ್ಶದಿಮಣ್ಣುಂಡ ಬಾಯಲಿ ಬ್ರಹ್ಮಾಂಡ ತೋರಿದ ಕೃಷ್ಣ 1
ಮಣ್ಣಿಗೇ ನಡೆಯಿತು ಮಹಾಭಾರತ ಯುದ್ಧಮಣ್ಣಿಗೇ ಮಡಿದರ ಸಂಖ್ಯೆಗೆಣೆಯಿಲ್ಲಮಣ್ಣಲಿ ಬಿತ್ತೆ ಬೀಜ ಮಹಾವೃಕ್ಷವಾಗುವುದುಅಣ್ಣ ನಮ್ಮಾದಿಕೇಶವನು ಅನುಗ್ರಹದಿಂ 2
***