..
kruti by ಲಕ್ಷ್ಮೀನಾರಯಣರಾಯರು Lakshminarayanaru
ಮನ್ನಿಸೆನ್ನ ವೆಂಕಟರನ್ನ ಅನ್ಯಥಾ ಗತಿಗಾಣೆ ನಾ ಪ
ಹಲವು ಜನುಮದಿ ಬಂದೆ ಬಲು ಪರಿಯಲಿ ನೊಂದೆ
ತೊಳಲಿ ಬಳಲಿ ನಿಂದೆ ಸಲಹೊ ತಂದೆ 1
ವಾಸವ ವಂದಿತ ಕೇಶವ ಅಚ್ಯುತ
ದಾಸರ ಮನ ಹಿತ ಬಾ ಶಾಶ್ವತ 2
ಲಕುಮಿಕಾಂತನೆ ಎನ್ನ ಉಕುತಿ ಲಾಲಿಸಿ ಘನ್ನ
ಭಕುತಿ ಪಾಲಿಸೊ ಮುನ್ನ ಮುಕುತೀಶನೆ3
***