Showing posts with label ಮರೆದೆಯೇನೋ ಚನ್ನರಾಯಾ ಒಮ್ಮೆ ಅರಿ ನೀನೆ ವೇಲಾಪುರಿ ಶ್ರೀ ಚನ್ನರಾಯಾ vaikunta vittala. Show all posts
Showing posts with label ಮರೆದೆಯೇನೋ ಚನ್ನರಾಯಾ ಒಮ್ಮೆ ಅರಿ ನೀನೆ ವೇಲಾಪುರಿ ಶ್ರೀ ಚನ್ನರಾಯಾ vaikunta vittala. Show all posts

Sunday, 1 August 2021

ಮರೆದೆಯೇನೋ ಚನ್ನರಾಯಾ ಒಮ್ಮೆ ಅರಿ ನೀನೆ ವೇಲಾಪುರಿ ಶ್ರೀ ಚನ್ನರಾಯಾ ankita vaikunta vittala

 ..

kruti by ಬೇಲೂರು ವೈಕುಂಠ ದಾಸರು belur vaikunta dasaru


ಮರೆದೆಯೇನೋ ಚನ್ನರಾಯಾ ಒಮ್ಮೆ

ಅರಿ ನೀನೆ ವೇಲಾಪುರಿ ಶ್ರೀ ಚನ್ನರಾಯಾ ಪ


ಪೊಳೆವ ನಂದನವನದಲಲರ್ದ ಮಾವಿನ ನೆಳಲ

ಲಲರುವಾ ಸಿರಿತೋಳ ತಲೆಗಿಂಬನೊರಗೀ

ಅಳಿಯ ಮೃದುಗಾನಕ್ಕೆ ತಲೆದೂಗುತಲೆ ನುಡಿದ

ವಿಲಸಿತದ ಸರಸ ವಚನವ ಚೆನ್ನರಾಯಾ 1


ಬೆಳದಿಂಗಳೆರಕದಂದದ ಸಾರದ್ಹಂದರದಿ

ಪೊಳೆವಿಂದುಕಾಂತದ ಜಗುಲಿಯೊಳೆನ್ನ

ತಲೆಯ ಮಗ್ಗಲನೊರಗಿ ಸುಳಿವೆಲರಗಾಳಿಗಂಜಿಸುತ

ಕಲೆಯರಿತು ಮೈಮರಸಿದುದ ಚನ್ನರಾಯಾ 2


ತನುಮಿಸುಕೆ ಬಹುವಿಧದಿ ಧ್ವನಿಗೈವ ಶಕುನಿ ಪೆಸ-

ರಿನ ಮಂಚದಲಿ ಹಂಸತೂಲ ತಲ್ಪದಲಿ

ಮನಸಿಜಾಗಮವರಿತು ಮನವ ಮೆಚ್ಚಿಸಿದೆ ಎ-

ನ್ನಿನಿಯ ಶ್ರೀ ವೈಕುಂಠಪತಿ ಚೆನ್ನರಾಯಾ 3

***