Showing posts with label ಮರೆವಾರೆ ಎನ್ನ ರಾಘವೇಂದ್ರ ಗುರುವೆ ಸಂಪನ್ನ vasudeva vittala. Show all posts
Showing posts with label ಮರೆವಾರೆ ಎನ್ನ ರಾಘವೇಂದ್ರ ಗುರುವೆ ಸಂಪನ್ನ vasudeva vittala. Show all posts

Wednesday, 1 September 2021

ಮರೆವಾರೆ ಎನ್ನ ರಾಘವೇಂದ್ರ ಗುರುವೆ ಸಂಪನ್ನ ankita vasudeva vittala

 ..

kruti by ವ್ಯಾಸತತ್ವಜ್ಞ ತೀರ್ಥರು vyasatatwajna teertharu 


ಮರೆವಾರೆ ಎನ್ನ ರಾಘವೇಂದ್ರ ಗುರುವೆ ಸಂಪನ್ನ

ಕರೆದು ಕಾಮಿತಗಳ ಕರವೆ ನಾ ನಿನಗೆಂದು ಪ


ದಾರಿಯ ತಪ್ಪಿ ಪೋಗುವ ಧೀರ ಫೋರನ್ನ

ದಾರಿಯ ಪಿಡಿಸಿನ್ನು ಪುರವನ್ನೆ ತೋರಿಸೆ

ಊರಿನವೊಳಗೆ ಅವನ ಆಗಾ

ದೂರ ನೋಡುವರೆ ದೋಷಗಳ ವಿಚಾರಮಾಡುವರೆ

ಧೀರರು ಆವ ಪರಿಯಲವನ ಪಾರಗಾಣಿಪರಲ್ಲದೆ 1


ಹಸಿದು ಪರರ ಕೇಳದ ದ್ವಿಜವರಿಯನ್ನ

ಶಿಶುವಿನ ನೋಡಿ ದಯದಿಂದ ಕರದಿನ್ನು

ಹಸಿದ್ಯಾಕೊ ಎಂದು ಪಾಕವ ಮಾಡಿ

ಹಸನಾಗಿ ತಂದು ಬಡಿಸುವ ಅವಸರದಿ ನಿಂದು,ಅವನ ದೋಷ

ಪಸರಿಸಿ ಉಣಿಸಿದ ಜನರುಂಟೆ ಧರೆಯೊಳು 2


ಜಲಪಾನಾತುರನಾಗಿ ಜಲವ ಕೇಳಿದ ವಿಪ್ರ-

ಕುಲ ತರಳನನು ನೋಡಿ ಕೃಪೆಯಿಂದ ಸುರನದಿ

ಜಲವನೀವೆನೆಂದು ಬ್ಯಾಗನೆ ದಿವ್ಯ

ಕಲಶವ ತಂದು ಬಾರೆಲೊ

ಬಲು ಆಲಸ್ಯವ್ಯಾಕೆಂದು ನಿನ್ನಯ ಪಂಕ

ತೊಳಿಯ ಕೊಡುವೆನೆಂದು ತಡವ ಮಾಡುವರೆ 3


ಸುಶರೀರ ತನುವನು ಮನದಲಿ ಬಯಸಿ ತಾ

ಉಸರದ ಮುನಿತನಯನ ಕಂಡು ತಾವಾಗಿ

ಕುಶಲವ ಕೇಳಿ, ದೇವತ ವೈದ್ಯ

ಅಸಮರೆಂದೇಳಿ, ರಸ ಮಾಡೆಂದೇಳಿ, ಅವಗೆ ದಿವ್ಯ

ರಸವನು ಪೇಳಿ, ಪಸಿ ನಿನ್ನಲಿದ್ದಾ

ಕಿಸರು ಪೋದರೆ ಕೊಡುವೆವೆಂದು ನಿಲುವರೆ 4


ಅರ್ತಿಯ ಭಕುತನ್ನ ನೋಡೀಗ ನಿನ ದಿವ್ಯ

ಕೀರ್ತಿಯ ನೋಡಿಕೊ, ವಾಸುದೇವವಿಠಲನ

ಮೂರ್ತಿಯ ಭಜಕ ಭಕ್ತರಾಭೀಷ್ಟ

ಪೂರ್ತಿಗೆ ಜನಕ ನಿನ್ನಯ ಗುಣ

ಸ್ಫೂರ್ತಿಗೆ ಜನಕ, ನಿನ್ನಯ ಗುಣ

ಸ್ಫೂರ್ತಿ ಉಳ್ಳನಕ ಪಾಪದ ಲೇಶ

ವಾರ್ತಿ ಎನಗೆ ಇಲ್ಲವೆಂದು ನಿಶ್ಚೈಸಿದೆ 5

***