Showing posts with label ಮಾಡು ದಾನ ಧರ್ಮ ಪರ ಉಪಕಾರವ ಮರೆಯ neleyadikeshava MAADU DAANA DHARMA PARA UPAKAARAVA MAREYA. Show all posts
Showing posts with label ಮಾಡು ದಾನ ಧರ್ಮ ಪರ ಉಪಕಾರವ ಮರೆಯ neleyadikeshava MAADU DAANA DHARMA PARA UPAKAARAVA MAREYA. Show all posts

Wednesday, 3 November 2021

ಮಾಡು ದಾನ ಧರ್ಮ ಪರ ಉಪಕಾರವ ಮರೆಯ ankita neleyadikeshava MAADU DAANA DHARMA PARA UPAKAARAVA MAREYA

RAAGA SAAMA


ಮಾಡು ದಾನ ಧರ್ಮ ಪರ ಉಪಕಾರವ ಮರೆಯದಿರೆಚ್ಚರಿಕೆ ಪ


ಕೇಡು ನೆನೆಯ ಬೇಡ ನಂಬಿದವರ ಮೇಲೆ ಕೆಡುವೆ ನೀನೆಚ್ಚರಿಕೆ ಅ


ಬಾಳು ಬದುಕು ಸಿರಿ ಇರುವಾಗ ಬಂಧುಬಳಗಗಳೆಚ್ಚರಿಕೆ

ಹಾಳು ಸಂಸಾರಕ್ಕೆ ಹಲವರ ಬಾಯ್ಗಳ ಬಡಿಯದಿರೆಚ್ಚರಿಕೆ 1


ಮೂಢರ ಒಡನಾಡಿ ಮುಂದೆ ಕೆಡಲು ಬೇಡ ಮೋಸ ನೋಡೆಚ್ಚರಿಕೆ

ನಾಡೊಳು ಸುಜನರ ನೋಡಿ ನಡೆ ಕಂಡ್ಯ ನಟನೆ ಬೇಡೆಚ್ಚರಿಕೆ 2


ಚೆನ್ನಾಗಿ ಬದುಕಿದೆ ಗಳಿಸಿದೆ ನಾನೆಂಬ ಹೆಮ್ಮೆ ಬೇಡೆಚ್ಚರಿಕೆ

ನಿನ್ನಾಯು ಮುಗಿಯಲು ಯಮದೂತರು ಬಂದು ಎಳೆಯುವರೆಚ್ಚರಿಕೆ 3


ಹೆಣ್ಣು ಹೊನ್ನು ಮಣ್ಣು ನಿನ್ನನ್ನಗಲಿ ಹೋಗುವರೆಚ್ಚರಿಕೆ

ಮುನ್ನ ಮಾಡಿದ ಪುಣ್ಯ ಬೆನ್ಹತ್ತಿ ಬರುವುದು ಮುಂದೆ ನೋಡೆಚ್ಚರಿಕೆ 4


ಒಬ್ಬರಂತೆಲ್ಲರ ನೋಡು, ಸತ್ಕರ್ಮದಿ ಉಬ್ಬಬೇಡೆಚ್ಚರಿಕೆ

ಕಬ್ಬುಬಿಲ್ಲನ ಪಿತನ ಏಕಾಂತ ಭಾವದಿ ನೆರೆನಂಬು ಎಚ್ಚರಿಕೆ 5


ತಿಂದೋಡಿ ಬಂಧುಬಳಗ ತಪ್ಪಿಸಿಕೊಂಬರೆಂದು ನೋಡೆಚ್ಚರಿಕೆ

ಎಂದೆಂದು ಅಗಲದ ಬಂಧು ಶ್ರೀಹರಿ ನಮಗೆಂದು ನೋಡೆಚ್ಚರಿಕೆ 6


ಕಾಲನ ದೂತರು ಯಾವಾಗ ಎಳೆವರೊ ಕಾಣದು ಎಚ್ಚರಿಕೆ

ಬೇಲೂರ ಪುರವಾಸ ನೆಲೆಯಾದಿಕೇಶವನಾಳಾಗು ಎಚ್ಚರಿಕೆ 7

***