Showing posts with label ಮಾಧವಾ ನಿಮ್ಮ ನಾಮ ಸಾಲದೇ gurumahipati. Show all posts
Showing posts with label ಮಾಧವಾ ನಿಮ್ಮ ನಾಮ ಸಾಲದೇ gurumahipati. Show all posts

Wednesday, 1 September 2021

ಮಾಧವಾ ನಿಮ್ಮ ನಾಮ ಸಾಲದೇ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು


ಮಾಧವಾ ನಿಮ್ಮ ನಾಮ ಸಾಲದೇ ಪ 


ಪರಗತಿ ಸುಖವನು ಸ್ಮರಿಸಲು ನಿನ್ನನಾ|| ಪರಿಪರಿ ತಪದಿಂದಾ ಚರಿಸುವ ದ್ಯಾತಕೆ ನಾ 1 

ಕರಿಕಿರಿಯನ್ನಲು ಶರೆಯನು ಬಿಡಿಸಿದ| ಶರಣ ಪ್ರಹ್ಲಾದನ ದುರಿತದಿ ಕಾಯ್ದ2 

ದ್ರೌಪದಿ ಸ್ಮರಿಸಲು ಆಪತ್ತ ಹರಿಸಿದ| ಆ ಪತಿತ-ಜಮಿಳ ಪಾಪದಿ ತರಿಸಿದ 3 

ನೆನೆಯಲು ಪಿಂಗಳಾ ಕ್ಷಣದಿ ಗತಿಯ ಕೊಟ್ಟಾ| ಬಿನುಗು ಮಂಡೂಕನ ವಿಮಾನದಿ ಮೆರೆಸಿದಾ4 

ದುರುಳನ ಕೈಯಿಂದ ಹರಣಿಯ ಕಾಯಿದಾ| ಗುರಿಯಾ ತಪ್ಪಿಸಿ ಸೆರೆ ಹೊರೆದ ಕಪೋತಕ5 

ಹಲವು ಸಾಧನದಿಂದ ಬಳಲುವ-ದ್ಯಾತಕ| ತಿಳಿದವ ಬೇಡಿದ ಫಲವನೇ ಕೊಡುತಿಹ 6 

ತಂದೆ ಮಹಿಪತಿ ನಂದನ ಸಾರಥಿ| ಎಂದೆಂದು ನನಗಿದೆ ಛಂರದಿ ಕುಡು ಕಂಡ್ಯಾ 7

****