ಮಾನಹೀನನಿಗೆ ಇಲ್ಲದ ಅಭಿಮಾನವ್ಯಾತಕೋ
ನಾನೇ ಬ್ರಹ್ಮನೆನ್ವನ ಮುಖ ನೊಡ್ವದ್ಯಾತಕೋ ಪ
ಹರಿಯೇ ಸರ್ವಪರಾ ಎನ್ನದವನ ಜ್ಞಾನವ್ಯಾತಕೋ
ತಾರತಮ್ಯವರಿಯದವನಾಚಾರ್ಯವ್ಯಾತಕೋ 1
ಆಶೆಯನು ಬಿಡದವಗೆ ಸನ್ಯಾಸವ್ಯಾತಕೋ
ಭಾಷೆ ಹೀನನಾದವನ ವಿಶ್ವಾಸವ್ಯಾತಕೋ 2
ಹರಿಯ ಜರಿದು ಹರಾಪರನೆನ್ವನ ಜನ್ಮವ್ಯಾತಕೋ
ವರದ ಶ್ರೀ ಹನುಮೇಶ ವಿಠಲ ಒಲಿವನ್ಯಾತಕೋ 3
****