Showing posts with label ಮುತ್ತು ಕೊಳ್ಳಿರೋ ಉತ್ತಮರೆಲ್ಲ ಜ್ಞಾನ ಸಮುದ್ರದಲಿನ್ನು mahipati MUTTU KOLLIRO UTTAMARELLA JNAANA SAMUDRADALINNU. Show all posts
Showing posts with label ಮುತ್ತು ಕೊಳ್ಳಿರೋ ಉತ್ತಮರೆಲ್ಲ ಜ್ಞಾನ ಸಮುದ್ರದಲಿನ್ನು mahipati MUTTU KOLLIRO UTTAMARELLA JNAANA SAMUDRADALINNU. Show all posts

Saturday, 4 December 2021

ಮುತ್ತು ಕೊಳ್ಳಿರೋ ಉತ್ತಮರೆಲ್ಲ ಜ್ಞಾನ ಸಮುದ್ರದಲಿನ್ನು ankita mahipati MUTTU KOLLIRO UTTAMARELLA JNAANA SAMUDRADALINNU



ಬಿಹಾಗ್ ರಾಗ ದಾದರಾ ತಾಳ

ಮುತ್ತು ಕೊಳ್ಳಿರೋ ಉತ್ತಮರೆಲ್ಲ ||ಧ್ರುವ||

ಜ್ಞಾನಸಮುದ್ರದಲಿನ್ನು ಧ್ಯಾನವೆಂಬ ಸಿಂಪಿನೊಳು
ಘನಗುರುಕರುಣದ ಮಳೆಯಾದ ಮುತ್ತು ಕೊಳ್ಳಿರೋ ||೧||

ಪಿಂಡಬ್ರಹ್ಮಾಂಡವೆಂಬ ಗಡ್ಡೆಯೊಳಿನ್ನು
ಪುಟ್ಟಿ ಭಕ್ತಿಭಾವ ಹಡಗದೊಳು ಬಂದ ಮುತ್ತು ಕೊಳ್ಳಿರೋ ||೨||

ಸಾಧು ಸಜ್ಜನರೆಂಬ ಮುತ್ತಿನ ಜೋಹರೇರ ಕೈಯ
ನಿಜಹಸ್ತಸ್ಪರ್ಶವಾದ ನೀವು ಮುತ್ತು ಕೊಳ್ಳಿರೋ ||೩||

ಅತ್ತಲಿತ್ತಲಾಗದೆ ಈ ಮುತ್ತು ಜತನಮಾಡಿ
ನಿಮ್ಮ ಚಿತ್ತ ಮನದೊಳು ಇಟ್ಟುಕೊಳ್ಳಿರೋ ||೪||

ತನುಮನಧನವನರ್ಪಿಸಿಕೊಂಡಿಹ ಮುತ್ತು
ಮಹಿಪತಿ ಇಹಪರವಸ್ತು ಮುತ್ತು ಕೊಳ್ಳಿರೋ ||೫||
***

ಮುತ್ತು ಕೊಳ್ಳಿರೋ ಉತ್ತುಮರೆಲ್ಲ ಪ  


ಜ್ಞಾನ ಸಮುದ್ರಲಿನ್ನು ಧ್ಯಾನವೆಂಬ ಸಿಂಪಿನೊಳು ಘನಗುರುಕರುಣದ ಮಳಿಯಾದ ಮುತ್ತು ಕೊಳ್ಳಿರೋ 1 

ಪಿಂಡ ಬ್ರಹ್ಮಾಂಡವೆಂಬ ಗಡ್ಡೆಯೊಳಿನ್ನು ಪುಟ್ಟಿ ಭಕ್ತಿಭಾವ ಹಡಗದೊಳು ಬಂದ ಮುತ್ತು ಕೊಳ್ಳಿರೋ 2 

ಸಾಧುಸಜ್ಜನರೆಂಬ ಮುತ್ತಿನ ಜೋಹರೇರ ಕೈಯ ನಿಜಹಸ್ತಸ್ಪರ್ಶವಾದು ನೀವು ಮುತ್ತು ಕೊಳ್ಳಿರೋ 3 

ಅತ್ತಲಿತ್ತಲಾಗದೆ ಈ ಮುತ್ತು ಜತನಮಾಡಿ ನಿಮ್ಮ ಚಿತ್ತ ಮನದೊಳು ಇಟ್ಟುಕೊಳ್ಳಿರೋ 4 

 ಮುತ್ತು ಮಹಿಪತಿ ಇಹರಪವಸ್ತು ಮುತ್ತು ಕೊಳ್ಳಿರೋ 5

***