ಮುದ್ದು ಕೃಷ್ಣನ್ನ ನೋಡ ಬನ್ನಿರೆಲ್ಲ ನಮ್ಮ
ಮಧ್ವರಾಯರಿಗೊಲಿದ ಸಿರಿ ಭೂಮಿ ನಲ್ಲ ಪ.
ಪಂಚ ಪಂಚ ಉಷಃ ಕಾಲದಲಿ ಎದ್ದು ಯತಿವರರು
ಪಂಚಬಾಣನ ಪಿತಗೆ ನಿರ್ಮಾಲ್ಯ ತೆಗೆದು
ಪಂಚ ಗಂಗೋದಕದಿ ಸ್ನಾನಗೈಸುತ ಹರಿಗೆ
ಪಂಚವಿಧ ಪಕ್ವಾನ್ನ ಉಣಿಸಿ ದಣಿಸಿಹರು 1
ಕಾಲ್ಕಡಗ ಗೆಜ್ಜೆ ಪೈಜಣ ಘಲ್ಲು ಘಲ್ಲೆನುತ
ಮೇಲೆ ಉಡುದಾರ ಉಡುಗೆಜ್ಜೆ ನಡುವಿನಲಿ
ಬಾಲಕೃಷ್ಣಗೆ ಅಸಲಿ ಹುಲಿ ಉಗುರು ಹೊನ್ನು ಸರ
ತೋಳ ಬಾಪುರಿಗಡಗ ಉಂಗುರಗಳ್ಹೊಳೆಯೆ 2
ಮುದ್ದು ಮುಖಕೊಂದು ಮೂಗುತಿ ಕರ್ಣಕುಂಡಲವು
ಕದ್ದು ಬೆಣ್ಣೆಯನು ಕಡಗೋಲ ಪಿಡಿದಿಹನು
ತಿದ್ದಿದ ತಿಲುಕ ಮುಂಗುರುಳೂ ಮುತ್ತಿನ ಸಾಲು
ಶುದ್ಧ ಚಿನ್ನದ ರತ್ನ ಮಕುಟ ಶಿರದಲ್ಲಿ 3
ರಮ್ಯವಾಗಿಪ್ಪ ವೈಕುಂಠಪುರಿಯನೆ ಬಿಟ್ಟು
ಜನ್ಮಸ್ಥಳವಾದ ಗೋಕುಲವ ತ್ಯಜಿಸಿ
ತಮ್ಮವರಿಗಾಗಿ ಕಟ್ಟಿದ ದ್ವಾರಕಿಯ ಕಳೆದು
ಬ್ರಹ್ಮಾದಿ ವಂದ್ಯ ತಾನಿಲ್ಲಿ ನೆಲೆಸಿಹನು 4
ಅಪಾರ ಮಹಿಮನು ಆನಂದ ತೀರ್ಥರಿಗೊಲಿದು
ಪಾಪಿ ಜನರುಗಳ ಉದ್ಧರಿಸಬೇಕೆಂದು
ಶ್ರೀಪತಿಯು ತಾ ಪುಟ್ಟ ರೂಪಧಾರಕನಾಗಿ
ಗೋಪಾಲಕೃಷ್ಣವಿಠ್ಠಲನಿಲ್ಲಿ ನಿಂತ 5
****
ಮುದ್ದು ಕೃಷ್ಣನ್ನ ನೋಡ ಬನ್ನಿರೆಲ್ಲ ನಮ್ಮ
ಮಧ್ವರಾಯರಿಗೊಲಿದ ಸಿರಿ ಭೂಮಿ ನಲ್ಲ ||pa||
ಪಂಚ ಪಂಚ ಉಷಃ ಕಾಲದಲಿ ಎದ್ದು ಯತಿವರರು
ಪಂಚಬಾಣನ ಪಿತಗೆ ನಿರ್ಮಾಲ್ಯ ತೆಗೆದು
ಪಂಚ ಗಂಗೋದಕದಿ ಸ್ನಾನಗೈಸುತ ಹರಿಗೆ
ಪಂಚವಿಧ ಪಕ್ವಾನ್ನ ಉಣಿಸಿ ದಣಿಸಿಹರು ||1||
ಕಾಲ್ಕಡಗ ಗೆಜ್ಜೆ ಪೈಜಣ ಘಲ್ಲು ಘಲ್ಲೆನುತ
ಮೇಲೆ ಉಡುದಾರ ಉಡುಗೆಜ್ಜೆ ನಡುವಿನಲಿ
ಬಾಲಕೃಷ್ಣಗೆ ಅಸಲಿ ಹುಲಿ ಉಗುರು ಹೊನ್ನು ಸರ
ತೋಳ ಬಾಪುರಿಗಡಗ ಉಂಗುರಗಳ್ಹೊಳೆಯೆ ||2||
ಮುದ್ದು ಮುಖಕೊಂದು ಮೂಗುತಿ ಕರ್ಣಕುಂಡಲವು
ಕದ್ದು ಬೆಣ್ಣೆಯನು ಕಡಗೋಲ ಪಿಡಿದಿಹನು
ತಿದ್ದಿದ ತಿಲುಕ ಮುಂಗುರುಳೂ ಮುತ್ತಿನ ಸಾಲು
ಶುದ್ಧ ಚಿನ್ನದ ರತ್ನ ಮಕುಟ ಶಿರದಲ್ಲಿ ||3||
ರಮ್ಯವಾಗಿಪ್ಪ ವೈಕುಂಠಪುರಿಯನೆ ಬಿಟ್ಟು
ಜನ್ಮಸ್ಥಳವಾದ ಗೋಕುಲವ ತ್ಯಜಿಸಿ
ತಮ್ಮವರಿಗಾಗಿ ಕಟ್ಟಿದ ದ್ವಾರಕಿಯ ಕಳೆದು
ಬ್ರಹ್ಮಾದಿ ವಂದ್ಯ ತಾನಿಲ್ಲಿ ನೆಲೆಸಿಹನು ||4||
ಅಪಾರ ಮಹಿಮನು ಆನಂದ ತೀರ್ಥರಿಗೊಲಿದು
ಪಾಪಿ ಜನರುಗಳ ಉದ್ಧರಿಸಬೇಕೆಂದು
ಶ್ರೀಪತಿಯು ತಾ ಪುಟ್ಟ ರೂಪಧಾರಕನಾಗಿ
ಗೋಪಾಲಕೃಷ್ಣವಿಠ್ಠಲನಿಲ್ಲಿ ನಿಂತ ||5||
***
ಮುದ್ದು ಕೃಷ್ಣನ್ನ ನೋಡ ಬನ್ನಿರೆಲ್ಲ ನಮ್ಮ
ಮಧ್ವರಾಯರಿಗೊಲಿದ ಸಿರಿ ಭೂಮಿ ನಲ್ಲ ||pa||
ಪಂಚ ಪಂಚ ಉಷಃ ಕಾಲದಲಿ ಎದ್ದು ಯತಿವರರು
ಪಂಚಬಾಣನ ಪಿತಗೆ ನಿರ್ಮಾಲ್ಯ ತೆಗೆದು
ಪಂಚ ಗಂಗೋದಕದಿ ಸ್ನಾನಗೈಸುತ ಹರಿಗೆ
ಪಂಚವಿಧ ಪಕ್ವಾನ್ನ ಉಣಿಸಿ ದಣಿಸಿಹರು ||1||
ಕಾಲ್ಕಡಗ ಗೆಜ್ಜೆ ಪೈಜಣ ಘಲ್ಲು ಘಲ್ಲೆನುತ
ಮೇಲೆ ಉಡುದಾರ ಉಡುಗೆಜ್ಜೆ ನಡುವಿನಲಿ
ಬಾಲಕೃಷ್ಣಗೆ ಅಸಲಿ ಹುಲಿ ಉಗುರು ಹೊನ್ನು ಸರ
ತೋಳ ಬಾಪುರಿಗಡಗ ಉಂಗುರಗಳ್ಹೊಳೆಯೆ ||2||
ಮುದ್ದು ಮುಖಕೊಂದು ಮೂಗುತಿ ಕರ್ಣಕುಂಡಲವು
ಕದ್ದು ಬೆಣ್ಣೆಯನು ಕಡಗೋಲ ಪಿಡಿದಿಹನು
ತಿದ್ದಿದ ತಿಲುಕ ಮುಂಗುರುಳೂ ಮುತ್ತಿನ ಸಾಲು
ಶುದ್ಧ ಚಿನ್ನದ ರತ್ನ ಮಕುಟ ಶಿರದಲ್ಲಿ ||3||
ರಮ್ಯವಾಗಿಪ್ಪ ವೈಕುಂಠಪುರಿಯನೆ ಬಿಟ್ಟು
ಜನ್ಮಸ್ಥಳವಾದ ಗೋಕುಲವ ತ್ಯಜಿಸಿ
ತಮ್ಮವರಿಗಾಗಿ ಕಟ್ಟಿದ ದ್ವಾರಕಿಯ ಕಳೆದು
ಬ್ರಹ್ಮಾದಿ ವಂದ್ಯ ತಾನಿಲ್ಲಿ ನೆಲೆಸಿಹನು ||4||
ಅಪಾರ ಮಹಿಮನು ಆನಂದ ತೀರ್ಥರಿಗೊಲಿದು
ಪಾಪಿ ಜನರುಗಳ ಉದ್ಧರಿಸಬೇಕೆಂದು
ಶ್ರೀಪತಿಯು ತಾ ಪುಟ್ಟ ರೂಪಧಾರಕನಾಗಿ
ಗೋಪಾಲಕೃಷ್ಣವಿಠ್ಠಲನಿಲ್ಲಿ ನಿಂತ ||5||
Muddu krushnanna noda bannirella namma
Siri bumi nalla ||pa.||
Pancha pancha ushah kaladali eddu yativararu
Pancabanana pitage nirmalya tegedu
Pancha gangodakadi snanagaisuta harige
Panchavidha pakvanna unisi danisiharu ||1||
Kalkadaga gejje paijana Gallu Gallenuta
Mele ududara udugejje naduvinali
Balakrushnage asali huli uguru honnu sara
Tola bapurigadaga unguragalholeye ||2||
Muddu mukakondu muguti karnakundalavu
Kaddu benneyanu kadagola pididihanu
Tiddida tiluka mungurulu muttina salu
Suddha cinnada ratna makuta Siradalli ||3|||
Ramyavagippa vaikunthapuriyane bittu
Janmasthalavada gokulava tyajisi
Tammavarigagi kattida dvarakiya kaledu
Brahmadi vandya tanilli nelesihanu ||4||
Apara mahimanu Ananda tirtharigolidu
Papi janarugala uddharisabekendu
Sripatiyu ta putta rupadharakanagi
Gopalakrushnaviththalanilli ninta ||5||