Showing posts with label ಮುದ್ದು ಸುರಿಯುತಾನೆ ನೋಡಿ ಕೃಷ್ಣ narahari P. Show all posts
Showing posts with label ಮುದ್ದು ಸುರಿಯುತಾನೆ ನೋಡಿ ಕೃಷ್ಣ narahari P. Show all posts

Thursday 5 August 2021

ಮುದ್ದು ಸುರಿಯುತಾನೆ ನೋಡಿ ಕೃಷ್ಣ ankita narahari P

 ..

kruti by pradyumna teertha ಪ್ರದ್ಯುಮ್ನತೀರ್ಥರು


ಮುದ್ದು ಸುರಿಯುತಾನೆ ನೋಡಿ ಕೃಷ್ಣ ಪ


ಮುದ್ದು ಸುರಿಯುತಾನೆ ಸಿದ್ಧ ಜನರ ವಂದ್ಯ

ಮಧ್ವವಲ್ಲಭ ಕೃಷ್ಣ ಹೃದ್ವನಜದಲಿ ಬಲ್ ಅ.ಪ

ತ್ರಿವಂಗಿ ಭಾವದಿ ಶ್ರೀ ವೇಣುಪಿಡಿದು ತಾ

ಸಾವೇರಿ ಮೊದಲಾದ ರಾಗವ ಪಾಡುತ1



ಬಲದ ಪಾದದಿ ಚೆಲುವ ಎಡದ ಪಾದವನಿಟ್ಟು

ನಳಿನಮುಖಿ ರುಕ್ಮಿಣಿ ಬಲ ಸತ್ಯಭಾಮೇರಿಂದ 2


ಧ್ವಜ ವಜ್ರಾಂಕುಶ ಚಕ್ರ ಕಂಜಚಿನ್ಹೆಗಳಿಂದ ತೇಜ

ಮುಕುಟ ಶಿರಶ್ಚಕ್ರ ಶೋಭಿತಮುಖ 3


ಶ್ರೀ ಪಾದರಾಯರಿಗೆ ಸ್ವಪ್ನಲಬ್ಧನಾಗಿ

ಶ್ರೀ ಪದ್ಮಭವಂದ್ಯ ಪ್ರತ್ಯಕ್ಷ ವ್ಯಾಸಮುನಿಗೆ 4


ಶ್ರೀ ನರಹರಿಯು ತಾ ನೆನೆಯುವರಿಗೆ

ಭವ ಕಾನನದ ಭಯದ ಮನ ಶಂಕಿಸದಿರೆಂದು5

***