ಮುರಹರನ ದಾಸರನು ಪ
ಕಟ್ಟು ಮಾಡಿದ ಯಮನು ತನ್ನ ದೂತರಿಗೆಅ ತಿರುಮಣಿ ತಿರುಚೂರ್ಣ ಶೃಂಗಾರ ಧರಿಸುವರಸಿರಿತುಳಸಿ ವನಮಾಲೆಯಿಂದೊಪ್ಪುವವರತಿರುಮಂತ್ರ ತೀರ್ಥಪ್ರಸಾದಕೊಳಗಾದವರತಿರುಪತಿ ಯಾತ್ರೆಯನು ಮಾಡುವ ಮಹಾತ್ಮರ 1
ಬಡವರಾಗಲಿ ಭಾಗ್ಯವಂತರಾಗಲಿ ಅವರುಕಡು ಕರ್ಮಿ ಘೋರಪಾತಕರಾಗಲಿನಡೆನುಡಿಗೆ ಮಾಧವನ ಬಿಡದೆ ಕೊಂಡಾಡುವರಗೊಡವೆ ಬೇಡೆಂದು ಯಮಧರ್ಮ ಸಾರಿದನು 2
ವಾಸುದೇವನ ವಾಸರವನಾಚರಿಸುವವರಬೇಸರಿಸದೆ ಹರಿಪ್ರಸಂಗ ಮಾಳ್ಪವರಶೇಷಶಯನ ಕಾಗಿನೆಲೆಯಾದಿಕೇಶವನದಾಸಾನುದಾಸರಿಗೆ ದಾಸರಾದವರ3
***