..
Kruti by ಸರಸಾಬಾಯಿ Sarasabai
ಯಂತ್ರೋದ್ಧಾರಕ ಪ್ರಾಣರಾಯ ಎನ್ನ ಚಿಂತೆ ಹರಿಸೋ ಪ.
ಅಂತರಂಗದಿ ಹರಿಯ ಧ್ಯಾನವ ಮಾಡಿಸೋ ಅ.ಪ.
ನಿನ್ನ ನೋಡಿ ಧನ್ಯಳಾದೆನೊ ಹೊನ್ನು ಹನುಮನೆ
ಎನ್ನ ಪಾಪ ಹರಿಸಿ ಕಾಯೊ ಘನ್ನ ಹನುಮನೆ 1
ಒಂದು ಅರಿಯದ ಮಂದಮತಿಯಳ ಬಂದು ಕಾಯೋ
ಬಂಧನವ ಬಿಡಿಸಿ ಕಾಯೋ ಸುಂದರಾಂಗನೆ 2
ತುಂಗಾತೀರದಿ ನಿಂತಿರುವಿ ಮಂಗಳಾಂಗನೆ
ಮಂಗಳ ರಾಮನ ಧ್ಯಾನವ ಮಾಡಿಸು ಎನಗೆ 3
ಹಂಪಿಯಲಿ ನಿಂತಿರುವಿ ಸೊಂಪಿನಿಂದಲಿ
ಸಂಪಿಗೆ ನೆರಳಲಿ ನೋಡಿದಿ ರಾಮರ ಧ್ಯಾನ ಮಾಡುತ 4
ರಾಮ ದೂತನೆ ಎನ್ನ ಮೊರೆಯ ಲಾಲಿಸಿ
ರಮಾವಲ್ಲಭವಿಠಲನ ಪಾದ ಬೇಗ ತೋರಿಸೊ 5
***