ಕಾಖಂಡಕಿ ಶ್ರೀ ಕೃಷ್ಣದಾಸರು
ಯಾಕ ಸ್ಮರಸದೀ ಮನಸಿಗೇ ಪ
ಯಾಕ ಸ್ಮರಸದೀ ಮನಸಿಗೆ | ಲೋಕದೊಳು ತನ್ನ ಸುಖಗೆ | ಮಾಕಾಂತ ನಡಿಗಳ ಮರೆಹೊಕ್ಕು | ವಿ ವೇಕ ಸೌಖ್ಯ ಪಡಿಯದೀಗ 1
ಉತ್ತಮ ಸಂಗವ ನೆರೆಮಾಡಿ ತನ್ನ | ಚಿತ್ತದ ಚಂಚಲ ನೀಡ್ಯಾಡೀ | ನಿತ್ಯದಿ ಗುರು ಹಿರಿಯರ ಶೇವೆಯಲಿ| ಹೊತ್ತು ಸಾರ್ಥಕ ಕಳಿಯದು ನೋಡು 2
ಸಣ್ಣ ದೊಡ್ಡವರಿಂದ ಭಲರೇಯಾ ಯಂದು | ಮನ್ನಿಸಿಕೊಳ್ಳದೇ ಅವರ ಕೈಯ್ಯಾ | ಕುನ್ನಿಯ ಛೀ ಸುಡು ಸುಡು ಯಂದು | ನಿನ್ನ ಜನ್ಮಕೆನಿಸುವದು ಬಲು ಕುಂದು 3
ವಿಹಿತವೇ ಅಹಿತವೆಂದು ಬಗೆವದು ತನ್ನ | ಸ್ವಹಿತವೇ ಅಹಿತೆಂದಾಚರಿಸುವುದು | ಇಹಪರ ಲೋಕಕ ಸಲ್ಲದು ಆಗಿ | ಕುಹಕ ಬುದ್ಧಿಯಿಂದಲೇ ಬಾಳುದು 4
ಜನಲಜ್ಜಾ ಮನಲಜ್ಜಾ ವೆರಡಿಲ್ಲಾ ಇದ | ಕೇನೋ ಮುಂದಣಗತಿ ಶಿವಬಲ್ಲಾ | ಅನುಮಾನ ವಿಲ್ಲಿದರೊಳು ಕಂಡು ಕೇಳಿ | ಘನಗುರು ಮಹಿಪತಿ ಜನ ಸೊಲ್ಲಾ 5
***