Showing posts with label ಯಾಕೆ ದಯಬಾರದೊ gopalakrishna vittala. Show all posts
Showing posts with label ಯಾಕೆ ದಯಬಾರದೊ gopalakrishna vittala. Show all posts

Friday, 27 December 2019

ಯಾಕೆ ದಯಬಾರದೊ ankita gopalakrishna vittala

ಯಾಕೆ ದಯಬಾರದೊ ಕಾಂತೇಶ ಪ್ರಾಣೇಶ
ಸಾಕಲಾರದೆ ಪೋದೆಯಾ ಎನ್ನನು ||pa||

ಏಕಚಿತ್ತದಿ ನಿನ್ನ ಚರಣ ನಂಬಿ ಬರಲು
ನೂಕುವುದುಚಿತವೇ ಶ್ರೀ ಭಾರತೀಶ ||a.pa||

ತೊಳಲಿ ಬಳಲಿ ಸುಖ ಸುಳಿವೆಂಬೋದರಿಯದೆ
ನಳಿನಾಕ್ಷನ ದಾಸ ನಿನ್ನ ಕೀರ್ತಿ
ಇಳೆಯೆಲ್ಲ ಪೊಗಳಲು ಸಲಹುವನೆಂತೆಂದು
ಬಳಿಗೆ ಬರಲು ಮನಕರಗದೆ ತಂದೆ ||1||

ಅಂದು ಕನಸಿನಲ್ಲಿ ಶಿರದಲ್ಲಿ ಕರವಿಟ್ಟೆ
ಇಂದೆಲ್ಲಿ ಪೋಯಿತೊ ಆ ಕರುಣ
ತಂದೆ ಮುದ್ದುಮೋಹನ ಗುರುಗಳ ವಚನವ
ತಂದಾದರೂ ಇಂದು ಒಲಿದೆನ್ನ ಕಾಯೊ||2||

ವಿೂಸಲ ದಾಸ್ಯಕೆ ಆಶೆ ಮಾಡಿದೆನೆಂದು
ದೋಷವೆಣಿಸುವರೆ ಎನ್ನಲಿ ನೀ
ಶೇಷಶಯನನೆ ಬಲ್ಲೆನೊ ಇದರ ಮರ್ಮ
ಘಾಸಿಗೊಳಿಸದೆ ನೀ ಅಭಯವನೀಯೊ ||3||

ರಾಮದಾಸ್ಯವ ಬಯಸಿ ನೇಮದಿಂದಲಿ ಇದ್ದು
ರಾಮನಾಗಮ ಕಂಡು ಎರಗಿ ನಿಂದು
ಭೂಮಿಜೆ ಪತಿ ಪಾದ ದಾಸ ಸಿದ್ಧಿಯ ಪಡೆದು
ಭೂಮಿಯೊಳು ಖ್ಯಾತನಾದೆಯೊ ಆಂಜನೇಯ ||4||

ಚಿತ್ತಿದಿ ಕೃಷ್ಣನ ದಾಸತ್ವ ಸಾಧಿಸ
ಮತ್ತೆ ಮುನಿಯಾಗಿ ಗ್ರಂಥವ ರಚಿಸಿ
ಚಿತ್ತದಿ ಗೋಪಾಲಕೃಷ್ಣವಿಠ್ಠಲನ ಪಾದ
ನಿತ್ಯದಿ ಭಜಿಪೆ ನೀ ಮತ್ತೆನ್ನ ಕಾಯೊ ||5||
***

ಯಾಕೆ ದಯಬಾರದೊ ಕಾಂತೇಶ ಪ್ರಾಣೇಶ ಸಾಕಲಾರದೆ ಪೋದೆಯಾ ಎನ್ನನು ಪ. 


ಏಕಚಿತ್ತದಿ ನಿನ್ನ ಚರಣ ನಂಬಿ ಬರಲು ಭಾರತೀಶ ಅ.ಪ. 


ತೊಳಲಿ ಬಳಲಿ ಸುಖ ಸುಳಿವೆಂಬೋದರಿಯದೆ ನಳಿನಾಕ್ಷನ ದಾಸ ನಿನ್ನ ಕೀರ್ತಿ ಇಳೆಯೆಲ್ಲ ಪೊಗಳಲು ಸಲಹುವನೆಂತೆಂದು ಬಳಿಗೆ ಬರಲು ಮನಕರಗದೆ ತಂದೆ 1 

ಅಂದು ಕನಸಿನಲ್ಲಿ ಶಿರದಲ್ಲಿ ಕರವಿಟ್ಟೆ ಇಂದೆಲ್ಲಿ ಪೋಯಿತೊ ಆ ಕರುಣ ತಂದೆ ಮುದ್ದುಮೋಹನ ಗುರುಗಳ ವಚನವ ಇಂದು ಒಲಿದೆನ್ನ ಕಾಯೊ2 

ವಿೂಸಲ ದಾಸ್ಯಕೆ ಆಶೆ ಮಾಡಿದೆನೆಂದು ದೋಷವೆಣಿಸುವರೆ ಎನ್ನಲಿ ನೀ ಶೇಷಶಯನನೆ ಬಲ್ಲೆನೊ ಇದರ ಮರ್ಮ ಘಾಸಿಗೊಳಿಸದೆ ನೀ ಅಭಯವನೀಯೊ 3 

ರಾಮದಾಸ್ಯವ ಬಯಸಿ ನೇಮದಿಂದಲಿ ಇದ್ದು ರಾಮನಾಗಮ ಕಂಡು ಎರಗಿ ನಿಂದು ಪತಿ ಪಾದ ದಾಸ ಸಿದ್ಧಿಯ ಪಡೆದು ಭೂಮಿಯೊಳು ಖ್ಯಾತನಾದೆಯೊ ಆಂಜನೇಯ 4 

ಚಿತ್ತಿದಿ ಕೃಷ್ಣನ ದಾಸತ್ವ ಸಾಧಿಸಿ ಮತ್ತೆ ಮುನಿಯಾಗಿ ಗ್ರಂಥವ ರಚಿಸಿ ಚಿತ್ತದಿ ಗೋಪಾಲಕೃಷ್ಣವಿಠ್ಠಲನ ಪಾದ ನಿತ್ಯದಿ ಭಜಿಪೆ ನೀ ಮತ್ತೆನ್ನ ಕಾಯೊ 5

****