..
ಯಾರಿಗಾರು ಬಹರು ಸಂಗಡ - ಮುಂದೆಮೀರಿ ನಡೆದ ಸಂಚಿತ ಕರ್ಮವಂತೆ ಕಂತೆ ಮುಂಗಡ ಪ
ಬರೆದ ಬರೆಹ ತೊಡೆದ ಮೇಲೆ ಕರೆದರಾಗ ಹೋಗಬೇಕುನೆರೆದು ಸುತ್ತಮುತ್ತ ಕುಳಿತ ಪರಮ ಬಂಧುವರ್ಗವೆಲ್ಲಇರಿಸಬೇಡಿ ಸುಡುಸುಡೆಂಬರು ಸುಟ್ಟಬಳಿಕಭರದಿ ಬಂದು ಮನೆಯೊಳೆಂಬರು ಪಾಪಿ ಸತ್ತತರುಣಿ ಕೆಟ್ಟಳೆಂದುಕೊಂಬರು ಆತ್ಮ1
ಸತಿಯು ಸುತರು ಪುತ್ರಿ ಮಿತ್ರರತಿಶಯದೊಳು ತಂದೆ ತಾಯಿಅತಿ ವಿನೋದಗೈಯುವ ಭಾವ ಜತನವೆಂಬೊ ಅತ್ತೆ ಮಾವಜೊತೆಗೆ ಹುಟ್ಟಿದಣ್ಣ ತಮ್ಮ ಈ ದೇಹ ತಾನುಸತ್ತ ಗಳಿಗೆ ಮುಟ್ಟಲಮ್ಮರು ಬರಿದೆ ನಾವುವ್ಯಥೆಗೆ ಸಿಕ್ಕಿದೆವೆಂಬರು ಆತ್ಮ 2
ಕಟ್ಟಿದರ್ಧ ಕರೆವ ಎಮ್ಮೆ ಕೊಂಡುಕೊಂಡ ಸಾಲಕದನುಪೋಟು ಮಾಡಿ ಮಕ್ಕಳೊಡನೆ ಅಷ್ಟು ಹೇಳಿ ಸಾವತನಕದುಷ್ಟ ಜನರು ಸುಮ್ಮನಿರುವರೆ ಕೈಯಲೊದಗಿದಷ್ಟು ಧರ್ಮವನ್ನು ಮರೆವರೆ ಆದಿಕೇಶವನ್ನಮುಟ್ಟಿ ಭಜಿಸಿ ಕಡೆಗೆ ಬಿಡುವರೆ ಆತ್ಮ 3
***