..
ರಾಮಾ ನಿನ್ನ್ಹ್ಹೊರತನ್ಯರ ಕಾಣೆ
ಪೊರೆ ನೀನೆನ್ನಾಣೇ ಶ್ರೀರಾಮಾ ಪ
ಕಾಮಾಂತಕ ತನ್ನ ಭಾಮೆಗೊರೆದ ಶ್ರೀ
ರಾಮತಾರಕಮಂತ್ರವೆ ಗತಿ ಲೋಕಕೆ ರಾಮಾಅ.ಪ
ಮತಿವಂತ ದಶರಥ ಕೌಸಲ್ಯೆಯರ ಸುತನಾಗ್ಯವತರಿಸಿ
ಅತಿ ಬಾಲ್ಯದಿ ಮುನಿಯೊಡನಡವಿಗೆ ನಡೆದು ಕಡು
ದುರುಳೆಯಸದೆದು
ಮತಿಹೀನ ರಕ್ಕಸರುಪಟಳವಳಿದು ಮುನಿಪತಿ ಮಖ ಬೆಳೆದು
ಪತಿಸುತಸಖಹಿತ ಜನಪತಿ ಜೀವಿತ
ಪಥದಾದರ್ಶವ ಜಗತಿಗೆ ತೋರಿದೆ1
ಮುನಿಗೌತಮಸತಿ ತಾ ಶಿಲೆಯಂತಿರಲು ಪದರಜದಿಂದುದ್ಧರಿಸಿ
ಘನ ಜಾಹ್ನವಿ ಚರಿತೆಯ ಕೇಳುತ ನಲಿದು ಅನುಜಾತನ ಬೆರೆದು
ಜನನಾಥನ ಜನಕನ ಮಿಥಿಲೆಗೆ ನಡೆದು ಹರಧನುವನುಪಡೆದು
ಅನುಪಮವೆನಿಪದ ನಡುವೊಳೆ ಖಂಡಿಸಿ
ಜನಕಸುತೆಯ ಕರಕಮಲವ ಪಿಡಿದೆ 2
ಪರಶುಹಸ್ತರು ಮಾರ್ಗದಿ ಎದುರಾಗಿ ಅಂಜಿಸೆ ಬೆರಗಾಗಿ
ಕರದಲ್ಲಾಟಿಕೆಯೊಲು ಧನುವದಗ್ರಹಿಸಿ ಕ್ಷಣದಲ್ಲುಪಹರಿಸಿ
ಪರಮಾದರ ನೀಡಿದೆ ಬಾಂಧವ
ಜನಕೆ ಹಿರಿಯರಿಗೆ ದಶರಥನಿಗೆ
ಸುರನರರೆಲ್ಲರು ಪರಮಾನಂದದೊ
ಳಿರುತಿರೆ ವಸಿದೆ ಸುದತಿಯೊಡನೆ ರಘುರಾಮ3
ಹಿಂದೆ ನಾ ಬಹುಜನ್ಮಗಳಲಿ ಬಂದು ನೊಂದೆನು ಈ ಭವದಿ
ಮುಂದೆ ಮಾರ್ಗವ ಕಾಣದೆ
ನಿನ್ನಲಿ ಬಂದು ನಿಂದೆ ಗತಿಯೆಂದು
ಸಂದೇಹವಿಲ್ಲ ನೀನೇ ಗುಣಸಿಂಧು ಜಗಕಾಪದ್ಬಂಧು
ತಂದೆ ನೀನಿಂದೆನ್ನ ಬಂಧನ ಬಿಡಿಸದೆ
ಕೊಂದೆಯಾದರೆ ಕುಂದದು ನಿನಗಪಯಶ 4
ಆನಂದಮಯ ನೀನಾನಂದದಲ್ಲಿದ್ದೆ ಆಶ್ಚರ್ಯವದೇಳು
ಆನಂದವನಂದು ಕುಂದದಲಿತ್ತೆ ಜಗಕತಿಶಯವೇಳು
ಸಾನಂದದೊಳಿದ್ದರು ತವಸನ್ನಿಧಿಬಲದಿ ಅತಿಶಯಮತ್ತೇಳು
ನೊಂದಜನಕೆ ಇಂದಾನಂದವ ನೀ
ನ್ಹೊಂದಿಸಿ ಪೊರೆ ರಘುರಾಮವಿಠಲ 5
****