ರುದ್ರಾ ವೀರಭದ್ರ ಅದ್ರಿನಂದನೆ ರಮಣಾ ಪ
ರೌದ್ರ ಮೂರುತಿ ದಯಾಸಮುದ್ರ ಎನ್ನನು ಕಾಣೊ ಅ. ಪ.
ಮುಪ್ಪುರವ ಗೆದ್ದ ಮುಕ್ಕಣ್ಣ ಮನ್ಮಥ ವೈರಿ
ಸರ್ಪಭೂಷಣ ಮೃತ್ಯು ನಿವಾರಣ
ವಾಕು 1
ಸದ್ಯೋಜಾತ ಭೂತನಾಥ ಭಕುತರದಾತ
ಖದ್ಯೋತ ಲಾವಣ್ಯ ಸುರಜ್ಯೇಷ್ಠನ
ಮಧ್ಯವಾಸನ ಛೇದ ಶ್ರೀ ವಿಷ್ಣುವಿನ ಪಾದ
ಹೃದ್ಯದೊಳಗಿಟ್ಟ ಜಟಾ ಜೂಟ ಬಲು ಧಿಟ್ಟ2
ಮನೋನಿಯಾಮಕ ಗುರುವೆ ದೈನ್ಯದಿಂದಲಿ ಕರೆವೆ
ಜನಿಸಿ ಕಾಡುವ ರೋಗ ಕಳೆಯೊ ಬೇಗ
ಅನುಪಮ ವಿಜಯವಿಠ್ಠಲನ ನಾಮಾಮೃತವ
ಎನಗುಣಿಸುವುದೋ ಸಾಂಬು ಮರುತ ಪ್ರತಿಬಿಂಬ 3
**********