Showing posts with label ವಂದನೆಯ ಮಾಡುವೆ ಶ್ರೀಗುರುವಿಗೆ mahadevapuravasa. Show all posts
Showing posts with label ವಂದನೆಯ ಮಾಡುವೆ ಶ್ರೀಗುರುವಿಗೆ mahadevapuravasa. Show all posts

Thursday 5 August 2021

ವಂದನೆಯ ಮಾಡುವೆ ಶ್ರೀಗುರುವಿಗೆ ankita mahadevapuravasa

   ..

ವಂದನೆಯ ಮಾಡುವೆ ಶ್ರೀಗುರುವಿಗೆ-

ವಂದನೆಯ ಮಾಡುವೆÀ 

ವಂದನೆ ಮಾಡುವೆನಿಂದು ಯದುಶೈಲದೋಳ್

ಚಂದದೊಳಿರುತಿಹ ತಂದೆ ನಾರಾಯಣಗೆ ಅ.

ಹರುಷದಿಂದಲಿ ಇನ್ನು ಹರಸಿ ಸಜ್ಜನರಿಗೆ

ವರಗಳ ಕೊಡುತಿಹ ವರಲಕ್ಷ್ಮಿ ತಾಯಿಗೆ 1

ಹಿರಿದಾದ ದೈತ್ಯನ ಸೀಳಿ ಸಂತೋಷದಿ

ಮೊರೆಹೊಕ್ಕ ಕಂದನ ಪೊರೆದ ನರಸಿಂಹಗೆ 2

ಪಾವನತರಮಾದ ದೇವಸಮೂಹವ

ಕಾವ ಕೃಪಾನಿಧಿ ಕಲ್ಯಾಣಮ್ಮಗೆ 3

ವಿಸ್ಫುರಿತದಲ್ಲಿರ್ಪ ವೈರ್ಮುಡಿ ತಿರುಮಣ್ಣು

ಸರ್ಪಶಯನಗರ್ಪಿಸಿದಂತ ಗರುಡಗೆ 4

ಶ್ರೀಲೋಲನಡಿಗಳ ಲೀಲಾಮೃತಗಳ

ಶೀಲರಾಗಿ ಕುಡಿದ ಶ್ರೇಷ್ಠ ಆಳ್ವಾರ್ರಿಗೆ 5

ವರದವಿಠಲನ ಒಲಿದು ತಾ ಬಂದಿನ್ನು

ಗಿರಿಯೊಳು ನೆಲೆಸಿದ ವರ ಗುರುಪೀಠಕೆ 6

ಪಂಕಜಾಕ್ಷನಪಾದಪಂಕಜ ನಂಬಿಹ

ವೆಂಕಟಪುರದೊಳಗಿರುವ ವೈಷ್ಣವರಿಗೆ 7

ವಿಷ್ಣುವಿನಂಶದಿ ಪುಟ್ಟಿ ಸಂತೋಷದಿ

ಸೃಷ್ಟಿಯನಾಳ್ವ ಶ್ರೀ ಕೃಷ್ಣಭೂಪಾಲಗೆ8

ಮರೆಯದೆ ಭಕ್ತರ ಕರುಣದಿಂದಲಿ ಕಾಯ್ವ

ವರಮಹದೇವನ ಪುರದಶ್ರೀರಂಗಗೆ 9

***