Showing posts with label ವರ್ಣಿಸಲಳವೆ ವೈಶಾಖದುತ್ಸವವಾ ವೈಶಾಖದುತ್ಸವ ಗೀತೆ venkatakrishna. Show all posts
Showing posts with label ವರ್ಣಿಸಲಳವೆ ವೈಶಾಖದುತ್ಸವವಾ ವೈಶಾಖದುತ್ಸವ ಗೀತೆ venkatakrishna. Show all posts

Tuesday, 1 June 2021

ವರ್ಣಿಸಲಳವೆ ವೈಶಾಖದುತ್ಸವವಾ ವೈಶಾಖದುತ್ಸವ ಗೀತೆ ankita venkatakrishna

by yadugiriyamma  


 ವೈಶಾಖದುತ್ಸವ ಗೀತೆ

ವರ್ಣಿಸಲಳವೆ ವೈಶಾಖದುತ್ಸವವಾ ಪ.


ವೃಷಭಸೇರಿದ ವೈಶಾಖಮಾಸದ ಶುಕ್ಲ

ಪಕ್ಷದ ಷಷ್ಠಿಯಲಿ ಕಂಕಣವ ಕಟ್ಟಿ ಪಟ್ಟದರಸಿ

ಯರ್ಸಹಿತ ದಿಟ್ಟತನದಲಿ ಪೊರಟು

ಶ್ರೇಷ್ಠವಾದ ಮಧ್ಯಮಂಟಪಕೆ ನಡೆತಂದ 1

ಮುದ್ದುಮೊಖ ಮುಗುಳ್ನಗೆಯು ವಜ್ರದ ಕಿರೀಟವು

ತಿದ್ದಿದ ಕಸ್ತೂರಿತಿಲಕ ಹೊಳೆವ ವಜ್ರದ

ಪದಕಗಳು ನಾಲ್ಕು ಮೂರನೆ ಧರಿಸಿ ಪ್ರಜ್ವಲಿಸುತ

ಬಂದ ಅರ್ಜುನ ಸಾರಥಿಯು 2

ಶಿರದಿ ಪುಷ್ಪವ ಧರಿಸಿ ಪರಮಪುರುಷನು ತಾನು

ಕೊರಳಲ್ಲಿ ವೈಜಯಂತಿಮಾಲೆಯನು ಧರಿಸಿ

ಕರದಲ್ಲಿ ಪರಿಮಳದ ಗಂಧವನು ಧರಿಸಿ ಪರಮ

ಪುರುಷನು ಬರುವ ಪರಿಯನೇನೆಂಬೆ 3

ದಂತದ ಉಯ್ಯಾಲೆಮಂಟಪದಲಿ ನಿಂದು

ಕಂತುಪಿತ ಕರ್ಪೂರದಚೂರ್ಣದಲಿ ಮಿಂದು

ಅಂತರಂಗದಿ ಭಕ್ತರಿತ್ತ ನೈವೇದ್ಯ ಉಂಡ ಲಕ್ಷ್ಮೀ

ಕಾಂತನು ನಡೆತರುವ ಪರಿಯನೇನೆಂಬೆ 4

ಮುಂದೆ ದ್ರಾವಿಡವೇದ ಹಿಂದೆ ವೇದಘೋಷಗಳು ಆ

ನಂದದಿಂ ಭಕ್ತರೆಲ್ಲ ಮುಂದೆ ಬರುತಿರಲು

ಛಂದದಿಂ ರಂಭೆಯರ ಕೋಲಾಟಗಳ ನೋಡಿ

ಇಂದಿರೆಯಿದಿರು ಮಂಟಪಕೆ ನಡೆತಂದ 5

ಸೃಷ್ಟಿಪತಿ ರಂಗನಿಗೆ ದೃಷ್ಟಿ ತಾಕುವುದೆಂದು

ಹಿಟ್ಟಿನಾರತಿಯಿಂದ ದೃಷ್ಟಿಯನು ತೆಗೆದು

ಶ್ರೇಷ್ಠವಾದ ಕರ್ಪೂರದ ಆರತಿಯನೆತ್ತಲು

ಥಟ್ಟನೆ ತಿರುಗಿದನು ಕೃಷ್ಣಮೂರುತಿ ತಾನು 6

ಸಪ್ತದಿನದಲಿ ರಂಗ ರತ್ನಮೌಳಿಯ ಧರಿಸಿ

ಮುತ್ತಿನಾ ಹಾರವನು ಹಾಕಿ

ರತ್ನದ ಉಡದಾರ ಉಡಗೆಜ್ಜೆಯನು ಧರಿಸಿ

ಪತ್ನಿ ಸಹಿತಲೆ ಬಂದು ಭತ್ತವನಳಿಸುವ ಸೊಬಗ 7

ಮುತ್ತಿನ ಕಿರೀಟವಿಟ್ಟು ಮುದದಿ ನಿಲುವಂಗಿ ತೊಟ್ಟು

ರತ್ನದಾ ಹಸ್ತದಲಿ ಅಭಯವನು ಕೊಟ್ಟು

ಕತ್ತಿ ಈಟಿ ಗುರಾಣಿ ಬತ್ತಳಿಕೆ ಅಳವಟ್ಟು

ಹಸ್ತದಲಿ ಕಡಿವಾಣವಿಟ್ಟು ಬರುವ ಸೊಬಗ 8

ಹತ್ತಿ ಹಯವನು ರಂಗ ಒಂಭತ್ತು ದಿನದಲಿ

ಚಿತ್ರಬೀದಿಯನೆಲ್ಲ ಸುತ್ತಿ ಬಂದು

ಮತ್ತೆ ಪುಷ್ಕರಣಿಯ ತೀರ್ಥದಲ್ಲಿ ಮಿಂದು

ಅರ್ತಿಯಿಂ ಬಂದ ನೀರಾಳಿಮಂಟಪಕೆ 9

ಮಿಂದು ಮಡಿಯನೆ ವುಟ್ಟು ಛಂದದಿಂದಲೆ ರಂಗ

ಬಂದು ಕಂಕಣವನ್ನು ಬಿಚ್ಚಿ ಆ

ನಂದದಿಂ ಕ್ಷೀರ ಘೃತ ಚೂತಫಲಗಳ ಸವಿದು

ನಿಂದ ವೆಂಕಟರಂಗ [ಕರುಣಾಂತರಂಗ] 10

****