Showing posts with label ವೆಂಕಟೇಶ ಭವ ಸಂಕಟ ಪರಿಹರಿಸೊ ಕಿಂಕರನೆಂದೆನಿಸೊ sirigurutandevarada vittala. Show all posts
Showing posts with label ವೆಂಕಟೇಶ ಭವ ಸಂಕಟ ಪರಿಹರಿಸೊ ಕಿಂಕರನೆಂದೆನಿಸೊ sirigurutandevarada vittala. Show all posts

Friday, 6 August 2021

ವೆಂಕಟೇಶ ಭವ ಸಂಕಟ ಪರಿಹರಿಸೊ ಕಿಂಕರನೆಂದೆನಿಸೊ ankita sirigurutandevarada vittala

 ..

Kruti by ಸಿರಿಗುರುತಂದೆವರದವಿಠಲರು sirigurutandevarada vittala 


ವೆಂಕಟೇಶ ಭವ ಸಂಕಟ ಪರಿಹರಿಸೊ ಕಿಂಕರನೆಂದೆನಿಸೊ ಪ


ಶಂಕೆಯಿಲ್ಲದೆ ಪಾದಪಂಕಜ ಪೂಜಿಸಲೂಮಂಕುಮತಿಯ ಕಳೆವಾ ಅಕಳಂಕನೆಂದೆನಿಸುವಾ ಅ.ಪ.


ಕಲಿಯುಗದೊಳು ಕಲಿ ಬಾಧೆಗೆ ಒಳಗಾಗಿ ಬಹುವಿಧವಾಗಿಒಲಿಸದೆ ವರಗುರು ಹಿರಿಯರ ನಿಂದಿಸುತಾ ವೇಳೆಗಳೆಯುತಾಗಳಿಸಿದೆ ಪಾಪವ ಚರಿಸುತ ಧರೆಯೊಳಗೆ ತೊಳಲುವೆ ತಮದೊಳಗೇಘಳಿಲನೆ ರಕ್ಷಿಸೊ ಬಾಲಕರನು ದೇವಾ ಎನ್ನಯ ಕುಲದೈವಾ 1


ಸಾಧನೆಗೋಸುಗ ಮೇದಿನಿಗೆ ಬಂದು ಸಾಧಿಸದೆ ಬಂದುಶೋಧಿಸುವೆನು ಪುರುಷಾರ್ಥದ ಮಾರ್ಗವನು ಮೋದವ ಪೊಂದುವೆನುಭೇದವ ತಿಳಿಯದೆ ಹಾದಿಯ ತಪ್ಪಿರುವೆ ಖೇದವ ಪುಡುತಿರುವೆಸಾದರದಲಿ ತವ ಪಾದದಿ ಧ್ಯಾನವನು ಒದಗಿಸಬೇಕಿನ್ನು 2


ಮಾರ ಜನಕನೆ ಮಂದ ತಾಪ ಬಿಡಿಸೊ ಕರುಣವ ತೋರಿಸೊಆರು ಮೂರು ವಿಧ ಭಕ್ತಿಯನೆ ಈಯೋ ಕರಪಿಡಿದು ಕಾಯೋಸಾರುವ ಭಕುತರ ಧೀರ ವೃಂದದೊಳಗೆ ಸೇರಿಸೊ ಜವದೊಳಗೆಧಾರುಣೀಶ ತಂದೆವರದವಿಠಲನೆ ಶರಣೆಂಬೆನು ನಾನೇ 3

***