Showing posts with label ವೆಚ್ಚಕುಂಟು ನಮಗೆ ಅಚ್ಯುತನಾಮ ನಿಶ್ಚಯದ ಧನವು mahipati. Show all posts
Showing posts with label ವೆಚ್ಚಕುಂಟು ನಮಗೆ ಅಚ್ಯುತನಾಮ ನಿಶ್ಚಯದ ಧನವು mahipati. Show all posts

Wednesday, 1 September 2021

ವೆಚ್ಚಕುಂಟು ನಮಗೆ ಅಚ್ಯುತನಾಮ ನಿಶ್ಚಯದ ಧನವು ankita mahipati

ವೆಚ್ಚಕುಂಟು ನಮಗೆ ಅಚ್ಯುತನಾಮ ನಿಶ್ಚಯದ ಧನವು ಪ  


ವೆಚ್ಚಮಾಡಿದರೆಂದಿಗೆ ಅಚ್ಚಳಿಯದು ನಿಶ್ಚಯದ ಬದಕು ಬಚ್ಚಿಟ್ಟುಕೊಂಡು ನಿಜ ಎಚ್ಚರಿಕಿಂದ ನಿಶ್ಚಿಂತದಲಿ ಉಂಬೆನು 1 

ಸಂಚಿತ ಧನವು ಬಡತನವನು ಹಿಂಗಿಸಿತು ಒಡಿಯನಖಂಡ ಕೃಪೆಯಿಂದಲಿ 2 

ಸಾದ್ಯವಾಯಿತು ಎನಗೆ ಸದ್ಗುರು ಕೃಪೆಯಿಂದ ನಿಜಧನವು ಮಾಡಿ ಸಾಧಿಸೊಕೊಂಬುವದು 3 

ಕಟ್ಟಬಿಡಲಾಗುದು ವಿಟ್ಟಿ ಹ್ಯಧನಕೊಟ್ಟರೆಂದಿಗೆ ತೀರದು ಇಟ್ಟಿಹ ತನುಮನದಲಿ ಘಟ್ಯಾಗಿ ಕೇಳಿರೊ ಈ ಮಾತವ 4 

ಅರುಹು ಅಂಜನವಿಟ್ಟಿ ತೋರಿದ ಗುರುಕರದಲಿ ಈ ಧನವು ಹರುಷವಾಯಿತು ಎನಗೆ ಧರೆಯೊಳು ತರಳಮಹಿಪತಿಗೆ 5

***