ಶರಣಾಗತ ರಕ್ಷಿಸಿ ಸ್ವಾಮಿ ಪೊರೆವುದು ಎನ್ನನು ಹರಿಯೇ
ಶರಣಾಗತನೊಳು ನಿರ್ದಯ ಸರಿಯೇ ಕರುಣಾಕರ ಗುಣನಿಧಿಯೇ ಪ
ಅಪರಾಧಗಳನು ಕ್ಷಮಿಸಿ ಸ್ವಾಮಿ ಕಾಪಾಡೋ ಮಾಧವನೇ
ಅಪಾರಪರ ಮಹಿಮನೇ ಪುರಾಣ ಪುರುಷೋತ್ತಮನೇ 1
ಶಂಖಚಕ್ರಧರನೇ ಸ್ವಾಮಿ ಪಂಕಜಪಿತನೆ
ಸಂಕಟಪರಿಹಾರಕನೇ ನಮ್ಮ ವೆಂಕಟ ವಿಠಲನೆ 2
ಸೃಷ್ಟಿಕರ್ತನು ನೀನೆ ಸ್ವಾಮಿ ಅಷ್ಟೈಶ್ವರ್ಯವೂ ನೀನೆ
ಶಿಷ್ಟರ ಪಾಲಿಪ ನೀನೆ ದುಷ್ಟರ ಸಂಹಾರಕನೇ 3
ವೇದ ಪುರಾಣವು ನೀನೆ ಮೇಧಿನಿಗಧಿಪತಿ ನೀನೆ
ಮಾಧವ ಮಧುಸೂದನನೇ ಆದಿ ಮೂರುತಿ ನೀನೆ 4
ಹನುಮೇಶ ವಿಠಲನೇ ಸ್ವಾಮಿ ಜನನಿ ಜನಕನು ನೀನೆ
ಜ್ಞಾನ ಪ್ರದಾಯಕ ನೀನೆ ಘನ ಮುಕ್ತಿಗೊಡೆಯನು ನೀನೆ 5
****