Showing posts with label ಶರಣು ಶರಣು ಪರಿಹರಿಸು jagannatha vittala. Show all posts
Showing posts with label ಶರಣು ಶರಣು ಪರಿಹರಿಸು jagannatha vittala. Show all posts

Saturday, 14 December 2019

ಶರಣು ಶರಣು ಪರಿಹರಿಸು ankita jagannatha vittala

ಜಗನ್ನಾಥದಾಸರು
ಶರಣು ಶರಣು ಪ

ಪರಿಹರಿಸು ಕರುಣಾಳು ಬಿನ್ನಪವ ಕೇಳು ಅ.ಪ.

ವಾಸವಾದ್ಯಮರನುತ ವನಜಸಂಭವನ ಸುತ
ನೀ ಸಲಹೊ ಕೈಲಾಸವಾಸ ಈಶ
ಕ್ಲೇಶ ಮೋದಾದಿ ಸಮ ತಿಳಿದು ಅಶ್ವತ್ಥಾಮ
ಶ್ರೀಶುಕ ದುರ್ವಾಸ ಸ್ಫಟಿಕ ಸಮಭಾಸ 1

ವೈಕಾರಿಕಾದಿ ತ್ರೈರೂಪ ನಿನ್ನಯ ಕೋಪ
ಶೋಕಕೊಡುವುದು ದೈತ್ಯಜನಕೆ ನಿತ್ಯ
ಲೌಕಿಕಗಳೆಲ್ಲ ವೈದಿಕವಾಗಲೆನಗೆ ಮೈ
ನಾಕಿ ಹೃತ್ಕುಮುದೇಂದು ಭಕ್ತಜನ ಬಂಧು 2

ಪವಮಾನತನಯ ನಿನ್ನವರಲ್ಲಿ ಕೊಡು ವಿನಯ
ದಿವಸ ಸವನಗಳಲ್ಲಿ ಎನ್ನಿರುವ ನೀ ಬಲ್ಲಿ
ಪವನ ದ್ವಿತಿಯರೂಪ ಸತತ ಎನ್ನಯಪಾಪ
ಅವಲೋಕಿಸದಲೆನ್ನ ಸಲಹೊ ಸುರಮಾನ್ಯ 3

ಶೇಷನಂದನ ಶೇಷಭೂಷಣನೆ ನಿಶೇಷ
ದೋಷರಹಿತನ ತೋರು ಕರುಣವನು ಬೀರು
ಶ್ರೀ ಷಣ್ಮುಖನ ತಂದೆ ಸತತ ನೀ ಗತಿಯೆಂದೆ
ಶೋಷಿಸು ಭವಾಮಯವ ಬೇಡುವೆನು ದಯವ4

ಗರ್ಗ ಮುನಿಕರಪದುಮ ಪೂಜ್ಯ ಚರಣಾಬ್ಜ ಮಮ
ದುರ್ಗುಣಗಳೆಣಿಸದಲೆ ಜಗದೆ ಮೇಲೆ
ನಿರ್ಗತಾಶನ ಜಗನ್ನಾಥ ವಿಠಲನ ಸ
ನ್ಮಾರ್ಗವನೆ ತೋರು ಈ ದೇಹ ನಿನ ತೇರು 5
********