ಕಾಖಂಡಕಿ ಶ್ರೀ ಕೃಷ್ಣದಾಸರು
ಶಿಶುಗಳಪರಾಧಕೆ ಶಿಕ್ಷೆ ಕಣ್ಣೀಲಲ್ಲದೇ ಯಶವ ಬಡಿಗೋಲವನು ಎತ್ತುವರೇ ರಂಗಾ ಪ
ಇಲಿಗೆ ಹೆಬ್ಬುಲಿಯಾಕೆ|ಮೊಲಕೆ ಮದಗಜವ್ಯಾಕೆ| ಕಳೆತ ಹಣ್ಣಿಗೆ ಮತ್ತೆ ಕರಗಸ್ಯಾಕೆ| ಕಲೆ ಬಿದ್ದ ಕನ್ನಡಿಗೆ ಗುದ್ದಲಿಯ ತರಲೇಕೆ| ಗುಳಲಿ ಕಾಯಿಗೆ ಹೊತ್ತಗಲ್ಲ ವ್ಯಾಕೆ 1
ಹಳ್ಳಗೆ ಹಡಗವ್ಯಾಕೆ|ಕೊಳ್ಳಿಗೆ ಕೊಡ ಜಲವ್ಯಾಕೆ| ಮುಳ್ಳು ಮುರಿದುದಕ ಮೊನೆ ಹಾರಿ ಯಾಕೆ| ಮಲ್ಲಿಗೆ ಹೋವಿಗೆ ಬಂಧ ಹಗ್ಗದಲ್ಯಾಕೆ| ಹಲ್ಲಿ ಬೆದರಿಸೆ ಹೊಡೆವ ಭೇರಿಯಾಕೆ 2
ಜ್ಞಾನಹೀನರ ನಮ್ಮ ತಪ್ಪನೆಣಿಸಿದುರಿತ| ಮೊನೆಗಾಣಿಸುತ ಬನ್ನಿ ಬಡಿಸುವುದುಚಿತವೇ| ದೀನವತ್ಸಲ ತಂದೆ ಮಹಿಪತಿ ಸುತ ಪ್ರಭುವೇ| ನ್ಯೂನಾರಿಸದೇ ನಿನ್ನವನೆಂದು ಸಲಹೋ 3
***