Showing posts with label ಶ್ರೀನಿವಾಸ ಮೂರುತಿಗೆ ಜಯತು ಮಂಗಳಂ venkatakrishna. Show all posts
Showing posts with label ಶ್ರೀನಿವಾಸ ಮೂರುತಿಗೆ ಜಯತು ಮಂಗಳಂ venkatakrishna. Show all posts

Tuesday, 1 June 2021

ಶ್ರೀನಿವಾಸ ಮೂರುತಿಗೆ ಜಯತು ಮಂಗಳಂ ankita venkatakrishna

by yadugiriyamma  

 ಶ್ರೀನಿವಾಸ ಮೂರುತಿಗೆ ಜಯತು ಮಂಗಳಂ

ಶೇಷಾಚಲವಾಸನೀಗೆ ಶುಭಮಂಗಳಂ ಪ


ರಂಗಮಾಣಿಕದ ದಿವ್ಯ ಕುಂದಣದ ಕಿರೀಟಕ್ಕೆ

ಸುಗಂಧವಾದ ಕರ್ಪೂರ ಕಸ್ತೂರಿ ತಿಲಕಕೆ

ಕಂದರ್ಪನ ಬಿಲ್ಲಪೋಲ್ವ ಚಂದವಾದ ಪುಬ್ಬುಗಳಿಗೆ

ಮಂದಹಾಸದಿಂದ ನೋಳ್ಪ ಅರವಿಂದನಯನಗಳಿಗೆ 1


ನಾಸಿಕಕೆ ಕರ್ಣಕುಂಡಲಕೆ ಸುವಾಸನೆವುಳ್ಳ ಅಧರಕ್ಕೆ

ಆಸುಂದರವಾದ ಶ್ರೀವತ್ಸ ಕೌಸ್ತುಭಮಣಿಗೆ

ಶ್ರೀಸತಿವೊಪ್ಪಿರುವ ವಿಸ್ತಾರವಾದ ವಕ್ಷಸ್ಥಳಕೆ ಕೈ

ಲಾಸವಾಸಿ ಪಿತನ ಪಡೆದ ನಾಭಿಯ ಕಮಲಕೆ 2


ಶಂಖ ಚಕ್ರ ನಾಗ ಬಾಪುರಿ ತೋರ್ಪಹಸ್ತಪಾದಗಳಿಗ

ಲಂಕಾರವಾದ ಪೀತಾಂಬರದ ವಡ್ಯಾಣದಂದಕ್ಕೆ

ಅಂದುಗೆ ಗೆಜ್ಜೆಗಳಿಟ್ಟ ಅಂದವಾದ ಪಾದಗಳಿಗೆ

ಗಂಗೆಯ ಪಡೆದ ನಖ ಅಂಗುಷ್ಟದ ಬೆಳಕಿಗೆ 3

****