Showing posts with label ಶ್ರೀಮದನಂತನೀತಾ ಶ್ರೀಮದನಂತನೀತಾ ಸೀಮರಹಿತಾ vijaya vittala. Show all posts
Showing posts with label ಶ್ರೀಮದನಂತನೀತಾ ಶ್ರೀಮದನಂತನೀತಾ ಸೀಮರಹಿತಾ vijaya vittala. Show all posts

Thursday, 17 October 2019

ಶ್ರೀಮದನಂತನೀತಾ ಶ್ರೀಮದನಂತನೀತಾ ಸೀಮರಹಿತಾ ankita vijaya vittala

ವಿಜಯದಾಸ
ಶ್ರೀಮದನಂತನೀತಾ ಶ್ರೀಮದನಂತನೀತಾ |
ಸೀಮರಹಿತಾ ಮಹಿಮನೀತಾ |
ನಾಮ ನೆನೆಯೆ ಒಲಿದು ನಿಷ್ಕಾಮ ಫಲವ ನೀವಾನೀತ
ಶ್ರೀಮದಾನಂತನೀತನು ಪ

ಆದಿದೈವನೀತಾ ಜೀವಾದಿಗಳಿಗಭಯದಾನೀತಾ |
ಶ್ರೀಧರಣಿ ದುರ್ಗಾರಮಣನಾದಾತನೊದಾನೀತಾ |
ವೇದಪಾಲಕನೀತಾ ಸನಕಾದಿಗಳಿಗೆ ಪ್ರೀತಾನೀತಾ |
ನಿತ್ಯ ಸಾಧುಗಳ ಕಾಯಿದನೀತಾ1

ಗಜವರದನೀತಾ ಗಂಗಜನ ಮನೋಭೀಷ್ಟನೀತಾ |
ಗಜ ರಜಕ ಬಿಲ್ಲು ಮಲ್ಲರ ವ್ರಜನನಾಳಿದ ದಿಟ್ಟಿನೀತಾ |
ತ್ರಿಜಗ ವಂದಿತಾನೀತಾ ಅಂಗಜನ ಪೆತ್ತ ಪ್ರೇಮನೀತಾ |
ಪಂಕಜ ಬಾಂಧವನ ಭಾಸನೀತಾ2

ಕಪಟನಾಟಕನೀತಾ ಕರಡಿ ಕಪಿಗಳನಾಳಿದನೀತಾ |
ಕಪಿಲಮುನಿಯಾಗಿ ತಾಯಿಗೆ ಉಪದೇಶವ ಪೇಳಿದನೀತಾ |
ದ್ರುಪದಸುತೆಯ ಕಾಯದನೀತಾ
ಸ್ವಪ್ನ ಸುಷುಪ್ತಿ ಜಾಗ್ರದಾವಸ್ಥೆಗೆ ಗುಪುತವ್ಯಾಪಕ ಗುಣನೀತಾ3

ಪರಮ ಪುರುಷನೀತಾ ದಶಶಿರನ ಕುಲವನಳಿದನೀತಾ |
ಗಿರಿಯಲಿ ಧರಿಸಿ ಲೋಕವ ಪೊರೆವ ವಿಶ್ವಾಧಾರನೀತಾ |
ಹರನ ವೈರಿಯ ಕೊಂದನೀತಾ | ನಿರುಪಮ ಮೂರುತಿನೀತಾ |
ಸುರರಿಗೆ ಉಣಿಸಿದನೀತಾ | ತರಳ ಲೀಲೆಯ ತೋರಿದನೀತಾ4

ನಿತ್ಯ ಜಪತಪಾದಿಗೆ ನೇಮಪ್ರಕಾರ ಚೇಷ್ಟಕನೀತಾ |
ಸಾಮ ಲೋಲ ವಿಜಯವಿಠ್ಠಲ ತಾಮರಸನಾಭನೀತಾ 5
*********