Showing posts with label ಶ್ರೀಮದಾಚಾರ್ಯ ಮುನಿ ಪ್ರೇಮದಲಿ ಸಲಹೊ gopalakrishna vittala madhwacharya stutih. Show all posts
Showing posts with label ಶ್ರೀಮದಾಚಾರ್ಯ ಮುನಿ ಪ್ರೇಮದಲಿ ಸಲಹೊ gopalakrishna vittala madhwacharya stutih. Show all posts

Monday, 2 August 2021

ಶ್ರೀಮದಾಚಾರ್ಯ ಮುನಿ ಪ್ರೇಮದಲಿ ಸಲಹೊ ankita gopalakrishna vittala madhwacharya stutih

ಶ್ರೀ ಮದಾಚಾರ್ಯ ಮುನಿ ಪ್ರೇಮದಲಿ ಸಲಹೊ ಪ.

ಕಾಮಪೂರ್ಣನೆ ಎನ್ನ ಕಾಮಿತವನೀಯೊ ಅ.ಪ.


ದ್ವಿತೀಯಯುಗದಲಿ ವಾಯುಸುತನಾಗಿ ಅವತರಿಸಿ

ಕ್ಷಿತಿಸುತೆಗೆ ಉಂಗುರವ ಹಿತದಿಂದಲಿತ್ತೆ

ತೃತಿಯುಗದಲಿ ಕುಂತಿಸುತನಾಗಿ ಕೌರವರ

ಹತಗೊಳಿಸಿ ಹರಿಯಪದ ಹಿತದಿ ಧ್ಯಾನಿಸಿದೆ 1

ಕಲಿಯುಗದೊಳವತರಿಸಿ ಕಲಿಕಲ್ಮಷವ ಕಳೆದು

ಒಲಿಸಿ ಹರಿಯನು ತುರಿಯ ಆಶ್ರಮದಲಿ

ಸುಲಭಮಾರ್ಗವ ತೋರಿ ಸುಜನರನು ರಕ್ಷಿಸಿದೆ

ಕಲಿಕಾಲ ಸಲಹೆನ್ನ ನೆಲಸಿ ಹೃದಯದಲಿ 2

ಆಚಾರ್ಯರೂಪದಲಿ ಗೋಚರಿಸಿ ಸ್ವಪ್ನದಲಿ

ಸೂಚಿಸಿದೆ ದಾಸತ್ವ ಸಿದ್ಧಿಸಲಿ ಎಂದು

ಯಾಚಿಸೆನೊ ಅನ್ಯರನು ನಾಚಿಕೆಯ ತೊರೆದಿನ್ನು

ನೀಚತನವನೆ ಬಿಡಿಸಿ ಗೋಚರಿಸೊ ಸತತ 3

ಉಪದೇಶವನೆ ಇತ್ತೆ ಗುಪಿತದಿಂ ಸ್ವಪ್ನದಲಿ

ಚಪಲತನದಲಿ ನಾನು ಅರಿಯಲಿಲ್ಲ

ಅಪರಿಮಿತ ಮಹಿಮ ಶ್ರೀ ಗುರುಗಳಲಿ ನೀ ನಿಂತು

ತಪ್ಪನೆಣಿಸದೆ ಎನ್ನ ನಮನ ಸ್ವೀಕರಿಸೊ 4

ವೇದವ್ಯಾಸರ ಪ್ರಿಯನೆ ಮೋದದಲಿ ಶಿಶುವಾದೆ

ಶ್ರೀ ದುರ್ಗೆ ತಾ ಬಂದು ಎತ್ತಿದಳೊ ನಿನ್ನ

ವಾದಿಗಳ ಗೆದ್ದ ಅನಾದಿ ಮುನಿ ನಮಿಸುವೆನೊ

ಶ್ರೀದ ಗೋಪಾಲಕೃಷ್ಣವಿಠ್ಠಲನ ತೋರೊ 5

****