ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ಲತಾಂಗಿಯ ವಲ್ಲಭಾ|ಎನ್ನ| ಪಾಲಿಸೋ ಭಕ್ತರ ಸುಲಭಾ ಪ
ಇಂದೀವರದಳ ನಯನಾ ಮು| ಕುಂದ ಉರಗರಾಜ ಶಯನಾ| ಮಂದರೋದ್ಧರ ಪಾಪ ಶಮನಾ|ಗೋ| ವಿಂದ ಖಗೇಶ್ವರ ಗಮನಾ 1
ಶರಣ ಜನರಾಭರಣಾ|ಮುರ| ಹರ ಜಗದೀಶನೇ ಕರುಣಾ| ಪರಮಾನಂದ ಜೀತ-ದೂಷಣಾ|ಮ| ಕರಕುಂಡಲ ಸುಭೂಷಣಾ 2
ಸರಸಿಜ ಭವನುತ ಸ್ವಾಮಿನ್ನಾ|ಶ್ರೀ| ಹರಿ ಪೂರಿತ ಮನೋಕಾಮನ| ಶರಧಿ ಕೀಲನಾ|ಗುರು| ವರ ಮಹಿಪತಿ ಸುತ ಪಾಲನಾ 3
***