Showing posts with label ಸಂಜೆಯೊಳಿಂತು ಬರುವರೆ pranesha vittala. Show all posts
Showing posts with label ಸಂಜೆಯೊಳಿಂತು ಬರುವರೆ pranesha vittala. Show all posts

Monday, 18 November 2019

ಸಂಜೆಯೊಳಿಂತು ಬರುವರೆ ankita pranesha vittala

by ಪ್ರಾಣೇಶದಾಸರು
ಸಂಜೆಯೊಳಿಂತು ಬರುವರೆ | ಶಬ್ದ ಹೊರುವರೆ | ಜನಕಂಜದಲಿಹರೆ ಪ

ಸಂಧ್ಯಾಕಾಲವು ಗೋವು ಬಾರವೆ,ವತ್ಸಬಳಲವೆ, ಹೀಗೆ ಬರುವುದು ಥರವೆ |ಅಂದಾರು ಅತ್ತಿ ಅತ್ತಿಗೆಯರು, ಇಷ್ಟು ಸಹಿಸಾರು, ಪತಿಗಳು ಸುಮ್ಮನಿರರು ||ಕಂದಗಳೆರೆವ ಸಮಯವಿದು, ಬಿಟ್ಟು ಬರುವುದು, ಚರ್ಯೆ ನೋಡಲ್ಕರಿದು |ಬಂದೊಂಧೆಳಲೆ ಮನೆಯೊಳು ದೀಪ, ಹಚ್ಚದಿರೆ ಪಾಪ, ಮಾಡಬೇಡಿರಿ ಕೋಪ 1

ಗಂಡನೇ ದೈವ ಹೆಂಗಸರಿಗೆ, ತಿಳಿಯದೆ, ಹೀಗೆ ಬರುವರೆ ಯನ್ನ ಬಳಿಗೆ |ಬಂಡುಇದೇನಿರೆ ಬತ್ತಲೆ, ಬಂದಿರೆಲ್ಲೆಲೆ, ಆಭರಣವೆಲ್ಲಿವಲ್ಲೆ ||ಕಂಡ ಕಂಡಲ್ಲೆ ಹುಡುಕುವರು, ನಿಮ್ಮನ್ನಾಳ್ವರು, ಕಾಣದಲೆ ಮಿಡುಕುವರು |ತುಂಟಾಟ ಕಲಿಯಬಾರದು ಇಷ್ಟು, ಪೇಳುವಿನೆ ಒಟ್ಟು, ಕೇಳಿರೆ ಮನವಿಟ್ಟು 2

ಆಯಿತು ನಾ ಗಂಡನಾದೇನೆ, ತಿಳಿಯದರೇನೆ, ಕಂಡವರು ನಗರೇನೆ |ಕಾಯೋ ಪ್ರಾಣೇಶ ವಿಠಲ ಎಂದು, ಯನ್ನ ಪದರೆಂದು, ನಮಸ್ಕರಿಸಿರೆ ಬಂದು ||ಈಯಾಟ ಸಲ್ಲ, ನಿಮ್ಮನೆಗೀಗ, ಸಾಗಿರೆ ಬೇಗ, ಪತಿಗಳ ಕೂಡಭೋಗ|ಆಯಾಸವಿಲ್ಲದೆ ಮಾಡಿರೆ, ಮಾತು ಕೇಳಿರೆ, ಭ್ರಾಂತರಾಗಬೇಡಿರೆ 3
*******