ಕಾಖಂಡಕಿ ಶ್ರೀ ಮಹಿಪತಿರಾಯರು
ಸಂಸಾರ ಚಿಂತೆ ನಮ್ಮ ಸ್ವಾಮಿ ಶ್ರೀ ಹರಿಗುಂಟು ಸಂಸಾರಿ ಕೃಷ್ಣ ಕರುಣಿಸುವ ಇದರಿಟ್ಟು ಪ
ತುತ್ತಾಯತವ ಮಾಡಿ ಹೊತ್ತು ನಡೆಸುವ ಒಡಿಯ ಮತ್ತೆ ಚಿಂತಿಸಲ್ಯಾಕೆ ಹತ್ತು ಕಡೆಯ ಭಕ್ತವತ್ಸಲ ಸ್ವಾಮಿ ಚಿಂತ್ಯಾಕೆನ್ನೊಡಿಯ ಗ್ರಾಸ ಭಕ್ತರೊಡಿಯ 1
ಅನೆ ಮೊದಲಿರುವೆ ಕಡೆ ತಾಂ ನಡೆಸುತಿರಲಿಕ್ಕೆ ಜನಕೊಡ್ಡಿ ಕೈಯ ನಾ ದಣಿಯಲೇಕೆ ಅನುದಿನ ಹರಿವಾಕ್ಯ ಅನುಭವಿಸುತಿರಲಿಕ್ಕೆ ಅನುಮಾನವಿಡಿದು ನಾ ಹೆಣಗಲ್ಯಾಕೆ 2
ಭಾರ ವಹಿಸಿ ಕೊಂಡಿರಲು ಮಾರಪಿತ ಪರಿಪೂರ್ಣ ಸಾರಾಂಶ ವಿತ್ತು ವರಕೃಪೆಯ ಙÁ್ಞನ ಆರ್ಹಂಗವೆನಗ್ಯಾಕೆ ತೋರುತಿದೆ ನಿಧಾನ ತರಳ ಮಹಿಪತಿ ಹೊರೆವ ಗುರು ಕರುಣ 3
***