Showing posts with label ಸಮೀರಜ ಹನುಮ ಎನ್ನ ಪ್ರಾಣಾಪದಕಾ ಶಿರಿಚರಣದಲಿ vijaya vittala. Show all posts
Showing posts with label ಸಮೀರಜ ಹನುಮ ಎನ್ನ ಪ್ರಾಣಾಪದಕಾ ಶಿರಿಚರಣದಲಿ vijaya vittala. Show all posts

Thursday, 17 October 2019

ಸಮೀರಜ ಹನುಮ ಎನ್ನ ಪ್ರಾಣಾಪದಕಾ ಶಿರಿಚರಣದಲಿ ankita vijaya vittala

ವಿಜಯದಾಸ
ಸಮೀರಜ ಹನುಮ ಎನ್ನ ಪ್ರಾಣಾಪದಕಾ ಪ
ಶಿರಿಚರಣದಲಿ ಮಸ್ತಕವನಿಟ್ಟ ಹೊಂತಕಾರಿ
ಸುರಪನಂದನನ ಕೊಲ್ಲಿಸಿದ ನಿರುತ ಉದಾರಿ
ಪರಮ ನಿನ್ನಂಘ್ರಿಯವಾರಿ ಸತತ ಶಿರದಲಿ
ಧರಿಸುವೆನು ರಿಪುನಿಕರ ಮಾರೀ1

ಉಂಗುರುವ ಕೊಂಡು ಸರ್ರನೆ ಸಾಗರ ಹಾರಿ
ತುಂಗ ಮಹಿಮಳಿಗೆ ವಂದಿಸಿ ಗುರುತನೆ ತೋರಿ
ಸಂಗಡಲೆ ಯಿತ್ತು ನಂದನ ಕಿತ್ತೆ ಬಲು ಮೀರಿ
ಸಂಗರಕೆ ಬಂದ ವಿಕಾರಿಗಳ ನೋಡಿ
ಭಂಗಬಡಿಸಿದೆ ಅವರ ಬಲವೆಲ್ಲ ತೂರಿ 2

ನಭಚರರು ಕೊಂಡಾಡೆ ಪುರವೆಲ್ಲ ದಹಿಸಿದೆ
ಅಭಿವಂದಿಸಿ ಕುರುಹವರಿಯನ ಮುಂದುವರಿಸಿದೆ
ಅಬುಧಿಯನು ವೇಗ ಬಂಧಿಸಿದೆ
ಪರ್ವತವ ರಭಸ ಮಿಗೆ ತಂದು ಕಪಿಬಲವನೆಬ್ಬಿಸದೆ 3

ದಾತನಿಗೆ ರಥವಾಗಿ ಚಲ್ಲಿರಿದು ಬೊಬ್ಬಿರಿದೆ
ಭೂತಳಕೆ ನೆಗ್ಗೊತ್ತಿ ಎದುರಾದವರ ತರಿದೆ
ನೀ ತಡೆಯದೆ ಪೋಗಿ ಮೈರಾವಣನ ಮುರಿದೆ
ಕೋತಿಗಳೊಳಗೆ ನೀ ಮೆರೆದೆ ವೇದ
ವಿಖ್ಯಾತನೆ ರಾಮ ಸಹಭೋಜದಲಿ ನೆರೆದೆ 4

ಬಲವನು ಬೆಳಿಸಿ ವಾರಿಧಿಯ ಆಚೆಗೆ ಬಲವ
ಆಲಸÀಗೈಸದಲೆ ದಾಟಿಸಿದೆ ಬಲು ಛಲವಾ
ವಾಲಯದಲಿ ಮಾಡಿ ವೈರಿದಳವನು ಗೆಲುವಾ
ಕಾಳಗದೊಳು ನಿನ್ನ ಬಲವ ಕೊಂಡಾಡಿದವರು
ಮೂಲೋಕದೊಳಗೆ ಸವಿಯದು ಬಲು ಚೆಲುವಾ 5

ಶತಮೌಳಿಯನು ಕೊಲಿಸಿ ಸತ್ಕೀರ್ತಿಯನು ಪಡೆದೆ
ಪ್ರತಿಕಕ್ಷಿ ನಿನಗಿಲ್ಲವೆಂದು ಸತ್ಯವ ನುಡಿದೆ
ಸತತದಲಿ ಕಾಪಾಡು ಎನುತ ಪಾದವ ಪಿಡಿದೆ
ಮತಿಯಲಿಡು ಎಂದು ಬೇಡಿದೆ ಅಭಯವ
ಚತುರ ಫಲದಾಯಕನೆ ದಯಮಾಡು ಬಿಡದೆ 6

ಕಿಂಪುರುಷ ಖಂಡದಲಿ ನಿಜಮೂರುತಿಯ ಧ್ಯಾನ
ಇಂಪಾಗಿ ಮಾಡುವ ಅಂಜನೆಯನಂದನಾ
ಲಂಪಟವೆ ಸಾಕು ನಿನ್ನಯ ಸುರದ್ರುಮ ಚರಣ
ಸಂಪಿನಲಿ ಪೊಂದಿಸನುದಿನ ಎನ್ನ ಗುರುಸಂಪತ್ತು ವಿಜಯವಿಠ್ಠಲನಲ್ಲಿ ಪ್ರಾಣಾ7
*********