..
ಸರಸಿಜನಯನಗೆ ಸಾಗರಶಯನಗೆ
ನಿರುತ ಸುಖಾನಂದಭರಿತನಾದವಗೆ
ಬರೆಸಿ ಉತ್ತರವ ಕಳುಹಿ ಹರುಷದಿ ತಂದ ಸತಿಯ-
ರರಸಿ ರುಕ್ಮಿಣಿ ಸಹಿತ
ಹರುಷದಿ ಕುಳಿತ ಹರಿಗೆ
ಸರಸದಾರತಿಯ ಬೆಳಗಿರೆ ಪ
ನಿಂದ್ಯ ಪರಿಹರಿಸಲು ಬಂದು ಯುದ್ಧವ ಮಾಡಿ
ಸಿಂಧುಗಟ್ಟಿದ ರಾಮಚಂದ್ರಗ್ವೊಂದಿಸುತ
ತಂದು ಮಗಳ ಧಾರೆ ಮಂದರೋದ್ಧ್ಧರಗೆರೆಯೆ
ಜಾಂಬುವಂತ್ಯೇರ ಸಹಿತಾನಂದದಿ ಕುಳಿತ ಹರಿಗೆ 1
ಮಿತ್ರೆ ಕಾಳಿಂದಿ ಭದ್ರಾ ಅಚ್ಚುತನೆಡಬಲ
ಲಕ್ಷಣ ನೀಲ ನಕ್ಷತ್ರದಂದದÀಲಿ
ಒಪ್ಪುವÀ ಚಂದ್ರನಂಥ ವಾರಿಜಾಕ್ಷನು ಇರಲು
ಅಷ್ಟಭಾರ್ಯೇರ ಸಹಿತ ನಕ್ಕು ಕುಳಿತ ಹರಿಗೆ 2
ನಾಶವಾಗಲಿ ನರ್ಕಾಸುರನ ಮಂದಿರ ಪೊಕ್ಕು
ಏಸುಜನ್ಮದ ಪುಣ್ಯ ಒದಗಿ ಶ್ರೀಹರಿಯು
ಶ್ರೀಶನ್ವೊಲಿದ ಭೀಮೇಶಕೃಷ್ಣನು ಸೋಳ-
ಸಾಸಿರ ಸತಿಯರಿಂದ್ವಿಲಾಸದಿ ಕುಳಿತ ಹರಿಗೆ 3
***