Showing posts with label ಸರಸಿಜನಾಭಾ ದಕ್ಷಿಣ ಶರಧಿನಿವಾಸಾ ಹಿರಣ್ಯಕಶ್ಯಪು ತಾ vijaya vittala. Show all posts
Showing posts with label ಸರಸಿಜನಾಭಾ ದಕ್ಷಿಣ ಶರಧಿನಿವಾಸಾ ಹಿರಣ್ಯಕಶ್ಯಪು ತಾ vijaya vittala. Show all posts

Thursday, 17 October 2019

ಸರಸಿಜನಾಭಾ ದಕ್ಷಿಣ ಶರಧಿನಿವಾಸಾ ಹಿರಣ್ಯಕಶ್ಯಪು ತಾ ankita vijaya vittala

ವಿಜಯದಾಸ
ಸರಸಿಜನಾಭಾ ದಕ್ಷಿಣ ಶರಧಿನಿವಾಸಾ ಪ

ಹಿರಣ್ಯಕಶ್ಯಪು ತಾ ಪ್ರಹ್ಲಾದನಾ ಬಾಧಿಸಲು
ಪರಿಯ ದೈವವೆ ಮೊರೆಯೋಗಲೂ
ಹಿರಿದಾಗಿ ಕೇಳಿ ಹಿತದಲಿ ಬಂದು ಬೊಬ್ಬಿಡಲು
ಹಿರಣ್ಯಗರ್ಭಾದಿಗಳು ಹಿರಿದು ಚಿಂತಿಸಲೂ 1

ಭುಗಿಲೆನೆ ಧಿಗಿಲೆನೆ ದಿಕ್ಕಿನೆಲಿ ಪ್ರತಿ ಶಬ್ದ ಪುಟ್ಟಿತಿರೆ
ಝಗಝಗಿಪ ಬೆಳಗು ಕವಿದದು ಮೂರು ಲೋಕಕ್ಕೆ
ಉಗುರು ಕೊನೆ ಪೊಗಳಿ ವೇದಗಳು ಬೆರಗಾಗಿ 2

ರಕ್ಕಸ ನೋಡಲು ಬಗೆದು ಕರುಳು ಕೊರಳಿಗೆ ಮಾಲೆ
ಇಕ್ಕಿ ಭಕ್ತಗೆ ಮೆಚ್ಚಿ ವರವನಿತ್ತಾ
ಕಕ್ಕಸದ ದೈವ ಅನಂತ ಪದುಮನಾಭ
ಮುಕ್ತಿದಾಯಕ ವಿಜಯವಿಠ್ಠಲ ಮಹದಾ3
********