Showing posts with label ಸರಸಿಜಾಕ್ಷ ಸರಸದಿಂದ ಸರಸಿಜೋದ್ಭವಗೊಲಿದು rangavittala. Show all posts
Showing posts with label ಸರಸಿಜಾಕ್ಷ ಸರಸದಿಂದ ಸರಸಿಜೋದ್ಭವಗೊಲಿದು rangavittala. Show all posts

Wednesday, 11 December 2019

ಸರಸಿಜಾಕ್ಷ ಸರಸದಿಂದ ಸರಸಿಜೋದ್ಭವಗೊಲಿದು ankita rangavittala

ಮೋಹನ ರಾಗ , ಛಾಪುತಾಳ

ಸರಸಿಜಾಕ್ಷ ಸರಸದಿಂದ ಸರಸಿಜೋದ್ಭವಗೊಲಿದು ಬಂದ ||ಪ||
ಉರಸಿನ ಮ್ಯಾಲೆ ಸರಸಿಜಾಕ್ಷಿಯನಿರಿಸಿ ಬಂದ ||ಅ.ಪ||

ಧೀರ ಶರಧಿಗಂಭೀರ ವರಘನಸಾರ ಕಸ್ತೂರಿತಿಲಕಧರ
ಹೀರ ಮೌಕ್ತಿಕ ಕೇಯೂರ ಧರಿಸಿದ ನವನೀತ ಚೋರ ಬಂದ ||೧||

ನಂದ ಗೋಪಿಗಾನಂದವೂಡಿದ ಕಂದ ಗೋಕುಲದಿ ಬಂದ
ಅಂದದಿಂದ ಸೌಂದರಿಯರ ಗೋವಿಂದ ಮುಕುಂದ ||೨||

ಅಂಗನೆಯರ ಕುಚಗಳಾಲಿಂಗನವ ಮಾಡಿ ನವಮೋಹನಾಂಗ
ರಂಗವಿಠಲನು ನಮ್ಮಂತರಂಗದೊಳಗಿಹ ಕಲ್ಮಷಭಂಗ ||೩||
*********