ಕಾಖಂಡಕಿ ಶ್ರೀ ಮಹಿಪತಿರಾಯರು
ಸರಸಿಜೋದ್ಭವನುತ ಸಿರಿಲೋಲ ಹರಿ ಸರ್ವರೊಳಿಹ ಶ್ರೀ ಗೋಪಾಲ ಶರಣಾಗತವತ್ಸಲ ಕರುಣಾನಿಧಿ ಕೃಪಾಲ ಸುರಜನ ಸಾನುಕೂಲ ವರಮುನಿಪಾಲ 1
ಮಾಮನೋಹರ ಮಾರಪಿತನೀತ ಕಾಮಪೂರಿತ ವಿಮಲ ಚರಿತ ಸಾಮಗಾಯನಪ್ರಿಯ ಸೋಮಶೇಖರ ಧೇಯ ಸಾಮಜ ವರದ ಸಮಸ್ತಹೃದಯ 2
ಸಾಹ್ಯಸಕಲಕೆ ಸನ್ನಿಧನೀತ ಇಹ ಸರ್ವಾನಂದ ಸರ್ವಭರಿತ ಸ್ವಹಿತ ಸುಖದಾತ ಬಾಹ್ಯಾಂತ್ರ ಸದೋದಿತ ಮಹಿಪತಿ ಪ್ರಾಣನಾಥ ಶ್ರೀಹರಿ ಸಾಕ್ಷಾತ 3
***