Showing posts with label ಸಾಧಿಸಿದೇ ನೋಡಿ ಪೂರ್ಣ ಆದಿ ತತ್ವದ ಸುಸ್ಥಾನ mahipati. Show all posts
Showing posts with label ಸಾಧಿಸಿದೇ ನೋಡಿ ಪೂರ್ಣ ಆದಿ ತತ್ವದ ಸುಸ್ಥಾನ mahipati. Show all posts

Wednesday, 1 September 2021

ಸಾಧಿಸಿದೇ ನೋಡಿ ಪೂರ್ಣ ಆದಿ ತತ್ವದ ಸುಸ್ಥಾನ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಸಾಧಿಸಿದೇ ನೋಡಿ ಪೂರ್ಣ ಆದಿ ತತ್ವದ ಸುಸ್ಥಾನ ಭೇದಿಸುವದನುದಿನ ಸದಾನಂದ ಗುರುಜ್ಞಾನ ಪ  


ಮಾತಿನಂತಲ್ಲವಿದು ಸ್ವಾತ್ಮಸುಖದ ಸಾಧನ ಶ್ರುತಿಗಗೋಚರ ನೋಡಿ ಪ್ರತ್ಯೇಕದನುಸಂಧಾನ ಅತಿಗುಹ್ಯಗೂಢವಿದು ಹಿತೋಪಾಯದ ಖೂನ ರತಿಗೊಟ್ಟುನೋಡಿ ಪ್ರತ್ಯಕ್ಷ ಇಹ್ಯ ನಿಧಾನ 1 

ನಡಿನೋಟ ನೀಟಮಾಡಿ ಪಡಕೊಳ್ಳದೆ ಸ್ವಹಿತ ನುಡಿಆಟದೋರಬ್ಯಾಡಿ ಕೂಡಿ ಸುಜ್ಞಾನÀಸನ್ಮತ ಬಡಬ್ಯಾಡಿ ನಾನಾಶ್ರಮವಿಡಿಯದೆ ಸುಗಮ ತಾ ಇಡಿದು ತುಂಬೇದ ಸಾಂದ್ರ ನೋಡಿ ಅನಂದೋಭರಿತ 2 

ಸಾಧನಕಿದೇ ಮುಖ್ಯ ಸಾಧಿಸಿದೆ ಗುರುದಯ ಇದಕಿಲ್ಲ್ಲಿನ್ನೊಂದಧಿಕ ಬುಧಜನರ ಉಪಾಯ ಅದರಿಂದೊಲುವ ತಾನು ಸದ್ಗುರು ಭಾನುಕೋಟ್ಯುದಯ ಸದ್ಗೈಸಿ ಮಹಿಪತಿಯ ಸದೋದಿತ ಉದಯ 3

***