Showing posts with label ಸಾಯಾಸದಿಂದ ಸಾಧಿಸಬೇಕು ಸತ್ಸಂಗ ಮಾಯಿಕಬುದ್ಧಿ mahipati. Show all posts
Showing posts with label ಸಾಯಾಸದಿಂದ ಸಾಧಿಸಬೇಕು ಸತ್ಸಂಗ ಮಾಯಿಕಬುದ್ಧಿ mahipati. Show all posts

Wednesday, 1 September 2021

ಸಾಯಾಸದಿಂದ ಸಾಧಿಸಬೇಕು ಸತ್ಸಂಗ ಮಾಯಿಕಬುದ್ಧಿ ankita mahipati

 ಸಾಯಾಸದಿಂದ ಸಾಧಿಸಬೇಕು ಸತ್ಸಂಗ ಮಾಯಿಕಬುದ್ಧಿ ಬಿಟ್ಟು ನೋಡಿ ಅಂತರಂಗ ಪ  


ಆಯಿತವಾಗಿ ತೋರುತಾನೆ ಶ್ರೀರಂಗ ಸಾಯದಲ್ಯಾಗುತದೆ ನೋಡಿ ಭವಭಂಗ 1 

ಹಿಡಿದರೆ ಹಿಡಿಯಬೇಕೊಂದೆ ಸಾಧು ಸಹವಾಸ ಪಡೆದರೆ ಪಡೆಯಬೇಕೊಂದೆ ತಾ ನಿಜಧ್ಯಾಸ ನಡಿನುಡಿ ಒಂದೆ ಆಗುವುದೆ ಅಪ್ರಯಾಸ ತಡಿಯದೆ ಮಾಡಬೇಕೊಂದೆ ನಿಜಾಭ್ಯಾಸ 2 

ಅನೇಕ ಪುಣ್ಯ ಒದಗಿತು ಸತ್ಸಂಗದಾಗ ದಿನಕರಕೋಟಿ ಹೊಳೆವುದು ಮನದೊಳಗೆ ಬ್ಯಾಗ ತನುಮನವಿಟ್ಟು ಕೇಳಿ ಗುರುಪಾದಕೀಗ ಘನಸುಖದಾಯಕ ಮಹಿಪತಿಯ ಸದ್ಗುರುವಿಗೆ 3

***