ಕಾಖಂಡಕಿ ಶ್ರೀ ಕೃಷ್ಣದಾಸರು
ಸಾರವೆಂದು ನಂಬಬ್ಯಾಡವೋ ಸಂಸಾರ ಸಾರವೆಂದು ನಂಬಬ್ಯಾಡವೋ ಪ
ಸಾರವೆಂದು ನಂಬದೇ ಸಂಸಾರ ಸುಖವೆಲ್ಲ ಅ ಕಂಸಾರಿ ಚರಣ ಸಾರಿರೋ ಅ.ಪ
ಇಂದ್ರಜಾಲ ದೊಡ್ಡವಣ ಗಂಧರ್ವ ಪುರದ ಮಾಟಾ ಸಾಂದ್ರಜಲ ಪೂರಾ ಛಂದವಿದು ನೋಡಿರ್ಯೋ ಕನಸಿನಲಿ ಕೆಂಯ್ಯಾ ಬೆಳೆಯ ಘನವಕಂಡು ನೆಚ್ಚಿ ತನ್ನ ಮನಿಯೊಳಿಹ ಧಾನ್ಯವೆಲ್ಲಾ ಜಿನುಗು ಮಾಡಿದಂದದಿ 1
ತನುವುತನ್ನನಳಿದರೆ ತನು ಸಂಬಂಧಿಗಳಾರು ಕ್ಷಣಿಕವಾದಾ ಸತಿಸುತ ಧನದ್ರವ್ಯ ಕಾಣಿರ್ಯೋ ಮರ್ಕಟವು ಕೀಲುದೆಗೆದು ಪುಕ್ಕಟೆವೆಸಿಕ್ಕಿದಂತೆ ಅಕ್ಕರದ ಸುಖವೆಲ್ಲಾ ದುಃಖ ರೂಪ ಕಾಣಿರ್ಯೋ 2
ಕುತ್ತಿನ ಮಡಹು ತಾಪತ್ರಯ ತಾರುಮನೆ ಮೃತ್ಯುಬಾಯ ತುತ್ತುರೋಗ ಹುತ್ತವಿದು ಕಾಣಿರ್ಯೋ ಮರಹು ನೀಗಿ ಹರಿಯಭಕ್ತಿ ಬೆರೆದು ನಿತ್ಯರಾಗಿರೆಂದು ಗುರು ಮಹಿಪತಿ ಭೋದಗರೆದ ವಾಕ್ಯನೋಡಿರ್ಯೋ 3
***